ದೀಪಾವಳಿ ಹಬ್ಬದ ಪ್ರಯುಕ್ತ 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ KSRTC

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸುಮಾರು 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಹಲವು ದಿನಗಳ ರಜೆಯ ನಡುವೆ ದೀಪಾವಳಿ ಸಂಭ್ರಮಿಸಲು ಊರುಗಳಿಗೆ ತೆರಳುವ ಮಂದಿಗೆ ಅನುಕೂಲವಾಗುವಂತೆ ನಿಗಮವು ಈ ಹೆಚ್ಚುವರಿ ಬಸ್ ಸೌಕರ್ಯ ಮಾಡಿದೆ. ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ನೆಲೆಸಿರುವ ಮಂದಿ ದೀಪಗಳ ಹಬ್ಬದಲ್ಲಿ ಪಾಲ್ಗೊಳ್ಳುವುದರಿಂದ ವಂಚಿತರಾಗಬಾರದೆಂಬ ಹಿನ್ನೆಲೆಯಲ್ಲಿ ಪ್ರತೀವರ್ಷದಂತೆ ಈಬಾರಿಯೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 22.10.2025 ಹಾಗೂ…

ಮತದಾರರ ಪಟ್ಟಿ ಅಕ್ರಮ ಆರೋಪ; ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಾದ್ಯಂತ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್)ಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಪ್ರಕರಣವನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿ, ಅರ್ಜಿದಾರರು ಈ ವಿಷಯವನ್ನು ಭಾರತ ಚುನಾವಣಾ ಆಯೋಗ (ಇಸಿಐ)ದ ಮುಂದೆ ಎತ್ತಿಕೊಳ್ಳುವಂತೆ ಸೂಚಿಸಿತು. ಅರ್ಜಿದಾರರ ಪರ ವಕೀಲರು, ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಈಗಾಗಲೇ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರೂ, ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಾದಿಸಿದರು. ಆದರೆ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ಅಗತ್ಯವಿಲ್ಲ ಎಂದು ತೀರ್ಮಾನಿಸಿ, ಅರ್ಜಿದಾರರು ಕಾನೂನಿನಡಿ ಲಭ್ಯವಿರುವ ಮಾರ್ಗಗಳನ್ನು ಅನುಸರಿಸಬಹುದು ಎಂದು ತಿಳಿಸಿತು. ಈ ಪಿಐಎಲ್‌ನಲ್ಲಿ “ಒಬ್ಬ ವ್ಯಕ್ತಿ, ಒಂದು ಮತ” ಎಂಬ ಸಂವಿಧಾನಿಕ ತತ್ವವನ್ನು ಕಾಯ್ದುಕೊಳ್ಳಲು ತುರ್ತು ನ್ಯಾಯಾಂಗ ಹಸ್ತಕ್ಷೇಪ ಅಗತ್ಯವಿದೆ ಎಂದು ವಾದಿಸಲಾಗಿತ್ತು. ಅರ್ಜಿಯ…

ಮಾಜಿ ಪ್ರಧಾನಿ ದೇವೇಗೌಡರು ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ವಾರದಿಂದ ಅವರು ಅಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಈಗ ಗಮನಾರ್ಹ ಸುಧಾರಣೆ ಕಂಡುಬಂದಿದೆ. ವೈದ್ಯರ ಸಲಹೆಯ ಮೇರೆಗೆ ಅವರಿಗೆ ಆಸ್ಪತ್ರೆಯಿಂದ ಬಿಡುಗಡೆ ನೀಡಲಾಗಿದ್ದು, ಅವರು ನೇರವಾಗಿ ತಮ್ಮ ಪದ್ಮನಾಭನಗರ ನಿವಾಸಕ್ಕೆ ಆಗಮಿಸಿದ್ದಾರೆ. ವೈದ್ಯರ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುಂದಿನ ಕೆಲವು ದಿನಗಳು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.

ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು!

ಬೆಂಗಳೂರು: ರಾಜ್ಯದಲ್ಲಿ RSS ನಿಷೇಧಿಸಲು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿರುವ ಬೆಳವಣಿಗೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ ಎಂದು ಅಶೋಕ್ ಗಮನ ಸೆಳೆದಿದ್ದಾರೆ. ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಸಿಎಂಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅಶೋಕ್, ‘ಆರ್ ಎಸ್ಎಸ್ ನಿಷೇಧ ಮಾಡುವ ಗೀಳು ಬಿಡಿ.…

ಮೊದಲ ತ್ರೈಮಾಸಿಕದಲ್ಲಿ ದೇಶದ ಚಿಲ್ಲರೆ ಪಾವತಿಗಳಲ್ಲಿ 99.8% ಡಿಜಿಟಲ್ ವ್ಯವಹಾರಗಳು

ನವದೆಹಲಿ: ದೇಶದ ಚಿಲ್ಲರೆ ಪಾವತಿಗಳಲ್ಲಿ ಡಿಜಿಟಲ್ ವಹಿವಾಟುಗಳು ಹೊಸ ಮೈಲುಗಲ್ಲು ಮುಟ್ಟಿವೆ. 2026ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ, ಒಟ್ಟು ಚಿಲ್ಲರೆ ಪಾವತಿಗಳಲ್ಲಿ ಡಿಜಿಟಲ್ ಪಾವತಿಗಳು 99.8 ಪ್ರತಿಶತದಷ್ಟು ಪಾಲು ಪಡೆದಿವೆ ಎಂದು ಕೇರ್‌ಎಡ್ಜ್ ಅನಾಲಿಟಿಕ್ಸ್ ಮತ್ತು ಅಡ್ವೈಸರಿ ಸಂಸ್ಥೆಯ ಹೊಸ ವರದಿ ತಿಳಿಸಿದೆ. ನೀತಿ ಉತ್ತೇಜನ, ಬಲವಾದ ತಾಂತ್ರಿಕ ಮೂಲಸೌಕರ್ಯ ಮತ್ತು ಫಿನ್‌ಟೆಕ್ ಕ್ಷೇತ್ರದ ನುಗ್ಗುವಿಕೆಗಳಿಂದ ಕಾಗದ ಆಧಾರಿತ ಸಾಧನಗಳಾದ ಚೆಕ್‌ಗಳ ಬಳಕೆ ಬಹುತೇಕ ನಿಂತುಹೋಗಿದೆ ಎಂದು ವರದಿ ಹೇಳಿದೆ. ಏಕೀಕೃತ ಪಾವತಿ ಇಂಟರ್ಫೇಸ್‌ (UPI), ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (AePS), ತಕ್ಷಣದ ಪಾವತಿ ಸೇವೆ (IMPS) ಮುಂತಾದ ವೇದಿಕೆಗಳು ಈ ಬದಲಾವಣೆಗೆ ಪ್ರಮುಖ ಚಾಲಕರಾಗಿದ್ದು, 2026ರ ಮೊದಲ ತ್ರೈಮಾಸಿಕದ ಅಂಕಿಅಂಶಗಳ ಪ್ರಕಾರ ಪಾವತಿ ಮೌಲ್ಯದ 92.6 ಪ್ರತಿಶತ ಮತ್ತು ವಹಿವಾಟಿನ ಪ್ರಮಾಣದ 99.8 ಪ್ರತಿಶತವನ್ನು ಹೊಂದಿವೆ. ಕೇರ್‌ಎಡ್ಜ್ ವರದಿಯ ಪ್ರಕಾರ, “ಮಾರ್ಚ್ 2021ರಲ್ಲಿ…

ಮುಂಗಾರು ಬೆಳೆ ಹಾನಿ ಪರಿಹಾರ 10 ದಿನಗಳಲ್ಲಿ ಬಿಡುಗಡೆ

ಬೆಂಗಳೂರು: ನೈಋತ್ಯ ಮುಂಗಾರು ಮಳೆಯಿಂದ ರಾಜ್ಯದ ಒಟ್ಟು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ, 10 ದಿನಗಳಲ್ಲಿ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇತ್ತೀಚೆಗೆ ಹಾನಿಗೊಂಡ 7.24 ಲಕ್ಷ ಹೆಕ್ಟೇರ್ ಬೆಳೆಗಳಿಗೆ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, 10 ದಿನಗಳೊಳಗೆ ಈ ಪ್ರದೇಶಗಳಿಗೂ ಪರಿಹಾರ ಪಾವತಿ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. “ರಾಜ್ಯ ಸರ್ಕಾರ ಸಂಪೂರ್ಣ ಪಾರದರ್ಶಕತೆಯೊಂದಿಗೆ, ಆಧಾರ್ ಜೋಡಣೆ ಇರುವ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪಾವತಿ ಮಾಡುತ್ತಿದೆ. ಅತಿವೃಷ್ಠಿ ಹಾಗೂ ಪ್ರವಾಹದಿಂದ ಹಾನಿಗೊಂಡ ಪ್ರದೇಶಗಳಿಗೆ ಸುಮಾರು 2,000 ಕೋಟಿ ರೂ. ಪಾವತಿಗೆ ಪ್ರಕ್ರಿಯೆ ಆರಂಭವಾಗಿದೆ. 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ,” ಎಂದು ಅವರು ಹೇಳಿದರು. 2025ರ ನೈಋತ್ಯ ಮುಂಗಾರದಲ್ಲಿ ಸೆಪ್ಟೆಂಬರ್ ಮೊದಲ ವಾರದ ಭಾರೀ ಮಳೆಯಿಂದ 5.29 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ…

ಅಫ್ಘಾನಿಸ್ಥಾನ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿರ್ಬಂಧ; ಪ್ರಧಾನಿ ಮೌನವೇಕೆ ಎಂದ ಕಾಂಗ್ರೆಸ್

ಮಂಗಳೂರು (ಕರ್ನಾಟಕ): ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಪದ್ಮರಾಜ್ ಆರ್. ಪೂಜಾರಿ, ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ಭಾರತದಲ್ಲೂ ತಾಲಿಬಾನಿ ನೀತಿ ಅನುಸರಿಸಿದ್ದು ಖಂಡನೀಯ ಎಂದಿದ್ದಾರೆ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ಪ್ರಧಾನಿ‌ ನರೇಂದ್ರ ಮೋದಿಯವರು ಈಗ ತಾರತಮ್ಯ ಆಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ ಎಂದು ಪದ್ಮರಾಜ್ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ…

ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆ; ಬಿಜೆಪಿ ಆರೋಪ

ಬೆಂಗಳೂರು: ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆಗೆ ಇಳಿದಿರುವ ಸಚಿವ ಸಂತೋಷ್ ಲಾಡ್ ಅವರು ಮತ್ತೊಂದು ಲೂಟಿಗೆ ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಶ್ರಮಿಕ ವಸತಿಸಹಿತ ಶಾಲೆಗಳ ನಿರ್ಮಾಣ ಕಾಮಗಾರಿ ಟೆಂಡ‌ರ್‌ನಲ್ಲಿ, ಟೆಂಡ‌ರ್ ಕರೆಯುವ ಮುನ್ನವೇ ಗುತ್ತಿಗೆದಾರರು ಹಾಗೂ ಉಪ ಗುತ್ತಿಗೆದಾರರೂ ನಿಗದಿಯಾಗಿದ್ದಾರೆ. ನಾಲ್ಕು ಪ್ಯಾಕೇಜ್ ಗುತ್ತಿಗೆ ಪೈಕಿ ಮೂರು ಅನ್ಯರಾಜ್ಯದ ಗುತ್ತಿಗೆದಾರರ ಪಾಲಾಗಿದೆ ಎಂದು ಬಿಜೆಪಿ ದೂರಿದೆ. ಇರುವ ಸರ್ಕಾರಿ ಶಾಲೆಗಳೇ ಪ್ರಸ್ತುತ ಮುಚ್ಚುತ್ತಿರುವಾಗ ಅಂತಹ ಶಾಲೆಯೊಂದನ್ನು ಗುರುತಿಸಿ ಕಾರ್ಮಿಕ ಮಂಡಳಿ ವಸತಿ ಶಾಲೆ ಆರಂಭಿಸಬಹುದಿತ್ತು. ಆದರ ಬದಲು ಕಾರ್ಮಿಕ ಇಲಾಖೆ ಹೊಸದಾಗಿ 700-800 ಕೋಟಿ ರೂ. ವೆಚ್ಚ ಮಾಡುತ್ತಿರುವುದು, ಪ್ರಸ್ತುತ ನಡೆಯುತ್ತಿರುವ ಟೆಂಡರ್ ಪ್ರಕ್ರಿಯೆ ಗಮನಿಸುವಾಗ ಇದೊಂದು ಬಕಾಸುರ ಕಾರ್ಮಿಕ ಸಚಿವರ ಹೊಟ್ಟೆ ತುಂಬಿಸುವ ಯೋಜನೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆಗೆ…

‘ಕಾಂತಾರ: ಅಧ್ಯಾಯ 1’ ಚಿತ್ರಕ್ಕೆ 15–16 ಡ್ರಾಫ್ಟ್‌ಗಳ ಬಳಿಕ ಚಿತ್ರಕಥೆ ಲಾಕ್‌: ರಿಷಬ್ ಶೆಟ್ಟಿ

ಮುಂಬೈ: ತಮ್ಮ ಹೊಸ ಚಿತ್ರ ‘ಕಾಂತಾರ: ಅಧ್ಯಾಯ 1’ ವ್ಯಾಪಕ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತಿರುವ ಸಂದರ್ಭದಲ್ಲಿ ನಟ-ನಿರ್ಮಾಪಕ ರಿಷಬ್ ಶೆಟ್ಟಿ ಚಿತ್ರಕಥೆಯನ್ನು ಅಂತಿಮಗೊಳಿಸಲು ತೆಗೆದುಕೊಂಡ ಡ್ರಾಫ್ಟ್‌ಗಳ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ. ಬಾಂದ್ರಾ ವೆಸ್ಟ್‌ನಲ್ಲಿ ಯಶಸ್ಸು ಆಚರಿಸುತ್ತಾ ರಿಷಬ್ ಶೆಟ್ಟಿ ಸುದ್ದಿಸಂಸ್ಥೆ ಜೊತೆ ಮಾತನಾಡಿ, ಚಿತ್ರದಲ್ಲಿ ಪ್ರತಿಯೊಂದು ಥೀಮ್ ಮತ್ತು ನಿರೂಪಣೆಯನ್ನು ನೇರವಾಗಿ ಚಿತ್ರಕಥೆಯಲ್ಲಿ ಸಾಧಿಸಲು 15-16 ಡ್ರಾಫ್ಟ್‌ಗಳು ಬೇಕಾಗಿದ್ದವು ಎಂದು ತಿಳಿಸಿದ್ದಾರೆ. “ಮೊದಲ ಭಾಗದಲ್ಲಿ ನಾವು 3-4 ಡ್ರಾಫ್ಟ್‌ಗಳನ್ನು ಮಾತ್ರ ಬರೆದಿದ್ದೆವು ಮತ್ತು 3-4 ತಿಂಗಳಲ್ಲಿ ಶೂಟಿಂಗ್‌ಗೆ ಹೋಗಿದ್ದೆವು. ಆದರೆ ಹಿಂದಿನ ಭಾಗದ ಹಿನ್ನೆಲೆ ಕಥೆಯನ್ನು ಸೇರಿಸಲು ನಂತರ 15-16 ಡ್ರಾಫ್ಟ್‌ಗಳಿಗೆ ಅಗತ್ಯವಾಯಿತು. ಹೀಗಾಗಿ ಸಂಪೂರ್ಣ ಕಥೆಯನ್ನು ರೂಪಿಸಿಕೊಂಡು ಶೂಟಿಂಗ್ ಆರಂಭಿಸಲಾಯಿತು” ಎಂದವರು ವಿವರಿಸಿದ್ದಾರೆ.

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶ ಹಾಕಿ; ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ. ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಈ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ. ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ…