ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮೇಲೆ ಸೈಬರ್ ದಾಳಿ ನಡೆದಿರುವ ಕುರಿತು ಪ್ರಕಟವಾದ ಮಾಧ್ಯಮ ವರದಿಗಳನ್ನು ಕೇಂದ್ರ ರಕ್ಷಣಾ ಸಚಿವಾಲಯ ತಳ್ಳಿಹಾಕಿದೆ. ಈ ಸಂಬಂಧ ನಡೆದ ತನಿಖೆಯಲ್ಲಿ ಯಾವುದೇ ಸಕ್ರಿಯ ಸೈಬರ್ ದಾಳಿ, ಅನಧಿಕೃತ ನೆಟ್‌ವರ್ಕ್ ಒಳನುಗ್ಗುವಿಕೆ ಅಥವಾ ಹೊಸ ಡೇಟಾ ಸೋರಿಕೆಯ ಪುರಾವೆಗಳು ಪತ್ತೆಯಾಗಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಸಚಿವಾಲಯದ ಪ್ರಕಾರ, ಸೋರಿಕೆಯಾಗಿದೆ ಎಂದು ಹೇಳಲಾಗುತ್ತಿರುವ ಹೆಚ್ಚಿನ ಮಾಹಿತಿಯು ಗೌಪ್ಯ ಅಥವಾ ವರ್ಗೀಕೃತ ದಾಖಲೆಗಳಲ್ಲ. ಕೆಲವು ದಾಖಲೆಗಳು 2020ರಿಂದ 2022ರ ಅವಧಿಯ ಹಳೆಯ ಉಲ್ಲಂಘನೆಗೆ ಸಂಬಂಧಿಸಿದ್ದು, ಅವುಗಳನ್ನು ಇತ್ತೀಚಿನ ಮತ್ತು ಸೂಕ್ಷ್ಮ ದಾಖಲೆಗಳಂತೆ ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ತಿಳಿಸಿದೆ. ತನಿಖೆಯಲ್ಲಿ ಒಂದೇ ಹಳೆಯ ಮಾಹಿತಿಯನ್ನು ಹಲವು ಸೈಬರ್ ಬೆದರಿಕೆ ಕಾರ್ಯಕರ್ತರು ಮಾರಾಟಕ್ಕೆ ಇಟ್ಟಿರುವುದು ಬೆಳಕಿಗೆ ಬಂದಿದ್ದು, ಅದಕ್ಕೆ ಪ್ರಸ್ತುತ ಡಿಆರ್‌ಡಿಒ ಅಥವಾ ರಕ್ಷಣಾ ಸಚಿವಾಲಯದ ಕಾರ್ಯಾಚರಣೆಗಳೊಂದಿಗೆ ಯಾವುದೇ ಸಂಬಂಧ ಇಲ್ಲ…

ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹಂತಹಂತವಾಗಿ ಸುಧಾರಿಸುತ್ತಿದ್ದರೂ, ಮೇಲಿನ ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಇನ್ನೂ 5 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ತಿಳಿಸಿದೆ. ಎಎಸ್‌ಡಿಎಂಎ ಮಾಹಿತಿ ಪ್ರಕಾರ, ಶಿವಸಾಗರ್, ಚರೈಡಿಯೊ, ಗೋಲಾಘಾಟ್, ಜೋರ್ಹತ್, ನಾಗಾಂವ್, ಸೋನಿತ್ಪುರ್ ಹಾಗೂ ಕಾಮರೂಪ್ (ಮೆಟ್ರೋ) ಜಿಲ್ಲೆಗಳ 622 ಗ್ರಾಮಗಳ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. ಸುಮಾರು 45,342 ಹೆಕ್ಟೇರ್ ಕೃಷಿ ಭೂಮಿ ಇನ್ನೂ ನೀರಿನಲ್ಲಿ ಮುಳುಗಿದ್ದು, ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಗೋಲಾಘಾಟ್ ಜಿಲ್ಲೆಯ ನುಮಾಲಿಗಢದಲ್ಲಿ ಧನ್ಸಿರಿ (ದಕ್ಷಿಣ) ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇತರ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಸಾವಿನ ಪ್ರಕರಣ ವರದಿಯಾಗಿಲ್ಲ. ಆದರೆ ಈ ವರ್ಷದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.…

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಬಿಗ್‌ಬಜೆಟ್ ಚಿತ್ರದ ಟ್ರೇಲರ್ ಜುಲೈ 30ರಂದು ಬೆಳಗಿನ ಜಾವ 4.15ಕ್ಕೆ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಅಧಿಕೃತವಾಗಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ‘ದಿ ಡಾನ್ ಆಫ್ ರಾಮಾಯಣ’ ಟ್ರೇಲರ್ ಅನ್ನು ಬ್ರಹ್ಮ ಮುಹೂರ್ತದಲ್ಲಿ ವಿಶ್ವದಾದ್ಯಂತ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಪವಿತ್ರ ಹಾಗೂ ಆಧ್ಯಾತ್ಮಿಕ ಸಮಯವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಇದೇ ವೇಳೆಯನ್ನು ಟ್ರೇಲರ್ ಬಿಡುಗಡೆಗೆ ಆಯ್ಕೆ ಮಾಡಲಾಗಿದೆ. ಎಲ್ಲವೂ ಯೋಜನೆಯಂತೆ ನಡೆದಿದ್ದರೆ ಟ್ರೇಲರ್ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರದ ವ್ಯಾಪಾರ ಮತ್ತು ಬಿಡುಗಡೆ ತಂತ್ರಕ್ಕೆ ಸಂಬಂಧಿಸಿದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಟ್ರೇಲರ್…

Curiosity builds as ‘Ramayana’ trailer release date is announced

Bengaluru: The makers of the much-awaited mythological epic ‘Ramayana’ have officially announced that the film’s trailer, titled ‘The Dawn of Ramayana’, will be released on July 30 at 4.15 am, heightening anticipation among movie enthusiasts. Producer Namit Malhotra shared a special poster on social media confirming that the trailer will premiere worldwide during Brahma Muhurta, a time considered highly auspicious in Hindu tradition. The trailer was originally expected to be released earlier but was postponed due to changes in the film’s business and release strategy. With the new announcement, fans…

ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವ ಹಾಗೂ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಸರ್ಕಾರ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಶಾಂತಿಯುತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಚ್ಚರಿಕೆ ನೀಡಿದೆ. ಟೈಫಾಯಿಡ್‌ಗೆ ಚಿಕಿತ್ಸೆ ಪಡೆಯುತ್ತಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ವಿದ್ಯಾರ್ಥಿಗಳಿಗೆ ಪೊಲೀಸರಿಂದ ಕಿರುಕುಳ ಮುಂದುವರಿದರೆ ಪಕ್ಷವು ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಲಿದೆ. ಸರ್ಕಾರ ವಿದ್ಯಾರ್ಥಿಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಭಿಜೀತ್ ದೀಪ್ಕೆ ಅವರು X ನಲ್ಲಿ ಹಾಕಿರುವ ಪೋಸ್ಟ್ ಹೀಗಿದೆ: “If the harassment of students at the hands of the police continues, the Cockroach Janta Party will respond with a massive peaceful protest soon. The Govt must stop targeting and…

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ನೀರು ಬಿಡುವಂತೆ ಸೂಚಿಸಲಾಗಿದ್ದರೂ, ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹ ತೀರಾ ಕಡಿಮೆಯಿದೆ. ಈ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಚರ್ಚಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮುಂಗಾರು ಹಂಗಾಮಿನಲ್ಲಿ ಕಾವೇರಿ ಕಣಿವೆಯ ಜಲಾಶಯಗಳ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಶೇಕಡಾ 42.8 ರಷ್ಟು ಮಳೆ ಅಭಾವ ದಾಖಲಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಹರಿದು ಬಂದ…

ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ಈ ಆದೇಶ ಹೊರಬಿದ್ದಿದ್ದು, ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಕಾವೇರಿ ನಿರ್ವಹಣಾ ಪ್ರಾಧಿಕಾರದ ನಿಯಮಗಳಿಗೆ ಬದ್ಧರಾಗಿರುವುದಾಗಿ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ಸಿಡಬ್ಲ್ಯುಆರ್‌ಸಿ ತೀರ್ಮಾನವನ್ನು “ವಿಚಿತ್ರ ನಿರ್ಧಾರ” ಎಂದು ಟೀಕಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಿಲ್ಲದಿರುವುದು ಹಾಗೂ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಕೊರತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಸಮಂಜಸವಲ್ಲ ಎಂದು ಅವರು ಹೇಳಿದ್ದಾರೆ. ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯದ ಪರವಾಗಿ ಸಮರ್ಪಕ ಅಂಕಿ-ಅಂಶಗಳೊಂದಿಗೆ ಸರ್ಕಾರ ವಾದ ಮಂಡಿಸುವಲ್ಲಿ…

ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

ಹನೂರು: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಹಣ ಎಣಿಕೆ ಬುಧವಾರ ಪೂರ್ಣಗೊಂಡಿದ್ದು, ಕಳೆದ 41 ದಿನಗಳ ಅವಧಿಯಲ್ಲಿ ₹3,37,06,956 ನಗದು ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 58 ಗ್ರಾಂ ಚಿನ್ನ ಹಾಗೂ 1 ಕೆಜಿ 250 ಗ್ರಾಂ ಬೆಳ್ಳಿ ವಸ್ತುಗಳನ್ನು ಭಕ್ತರು ಹುಂಡಿಗೆ ಸಮರ್ಪಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯಿರುವ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಿ. ಪುರುಷೋತ್ತಮ್ ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಮಂಗಳವಾರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ನಿಗಾದಲ್ಲಿ ಹಣ ಎಣಿಕೆ ಕಾರ್ಯ ಆರಂಭಗೊಂಡು ಬುಧವಾರ ಸಂಜೆ ಪೂರ್ಣಗೊಂಡಿತು. ಸರ್ಕಾರಿ ರಜೆಗಳು, ಅಮಾವಾಸ್ಯೆ ವಿಶೇಷ ಪೂಜೆ, ಜಾತ್ರಾ ಮಹೋತ್ಸವ ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳಾ ಭಕ್ತರ ಸಂಖ್ಯೆಯಲ್ಲಿ…

ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಕತಾರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿ ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ಆತ್ಮೀಯ ಹಾಗೂ ಭಾವಪೂರ್ಣ ಬೀಳ್ಕೊಡುಗೆ ನೀಡಿತು. ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರ (ICC), ಭಾರತೀಯ ಸಮುದಾಯ ಕಲ್ಯಾಣ ವೇದಿಕೆ (ICBF), ಭಾರತೀಯ ಕ್ರೀಡಾ ಕೇಂದ್ರ (ISC) ಹಾಗೂ ಭಾರತೀಯ ಉದ್ಯಮ ಮತ್ತು ವೃತ್ತಿಪರರ ಮಂಡಳಿ (IBPC) ಜಂಟಿಯಾಗಿ ಆಯೋಜಿಸಿತ್ತು. ಸಮಾರಂಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಗಣ್ಯರು ವಿಪುಲ್ ಅವರನ್ನು ‘ಪೀಪಲ್ಸ್ ಅಂಬಾಸಿಡರ್’ ಎಂದು ಗೌರವಿಸಿ, ಭಾರತೀಯ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿದ ಅವರ ಸೇವೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಪುಲ್, ಕತಾರ್‌ನಲ್ಲಿರುವ 8.3 ಲಕ್ಷಕ್ಕೂ ಅಧಿಕ ಭಾರತೀಯ ಸಮುದಾಯ ವಿಶ್ವದ ಅತ್ಯಂತ ಶಿಸ್ತಿನ ಸಮುದಾಯಗಳಲ್ಲಿ ಒಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ…

ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಿ, ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು, ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಯುವಜನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಸಭಾಂಗಣದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ವಿಶೇಷ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ. ಪ್ರಧಾನಿ…