ನವದೆಹಲಿ: ಜೀವ ರಕ್ಷಕ ಔಷಧಿಗಳನ್ನು ಸಾಮಾನ್ಯ ಜನತೆಗೆ ಇನ್ನಷ್ಟು ಕೈಗೆಟುಕುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, 33 ಕ್ಯಾನ್ಸರ್ ಹಾಗೂ ಅಪರೂಪದ ಕಾಯಿಲೆಗಳಿಗೆ ಬಳಸುವ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 12ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಜೀವ ಉಳಿಸುವ ಔಷಧಿಗಳಿಗೆ ಶೂನ್ಯ ತೆರಿಗೆ ಕ್ಯಾನ್ಸರ್, ಅಪರೂಪದ ಕಾಯಿಲೆಗಳು ಹಾಗೂ ಇತರ ಗಂಭೀರ ದೀರ್ಘಕಾಲದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳು ಜಿಎಸ್‌ಟಿ ವಿನಾಯಿತಿಗೆ ಒಳಪಡಲಿವೆ. ಹಲವಾರು ಔಷಧಿಗಳು ಶೇಕಡಾ 12ರಿಂದ 5ಕ್ಕೆ ಇಳಿಯುತ್ತವೆ. ದೃಷ್ಟಿ ಸರಿಪಡಿಸುವ ಕನ್ನಡಕ, ಫ್ರೇಮ್‌ಗಳು ಶೇಕಡಾ 28ರಿಂದ 5ಕ್ಕೆ ಇಳಿಯುತ್ತವೆ. ಆರೋಗ್ಯ ಸೇವೆಗೂ ರಿಲೀಫ್ ವೈಯಕ್ತಿಕ ಆರೋಗ್ಯ ಹಾಗೂ ಜೀವ ವಿಮೆ ಪ್ರೀಮಿಯಂಗಳ ಮೇಲಿನ ಜಿಎಸ್‌ಟಿ (18%) ಶೂನ್ಯಕ್ಕೆ ಇಳಿಕೆ. ವೈದ್ಯಕೀಯ ಆಮ್ಲಜನಕ, ರೋಗನಿರ್ಣಯ ಕಿಟ್‌ಗಳು,…
Category: ಪ್ರಮುಖ ಸುದ್ದಿ
ಜಿಎಸ್ಟಿ ಸುಧಾರಣೆ: ಪ್ರಧಾನಿ ಮೋದಿ ನಾಯಕತ್ವಕ್ಕೆ ಗಣ್ಯರಿಂದ ಶ್ಲಾಘನೆ
ನವದೆಹಲಿ: ಜಿಎಸ್‌ಟಿ ದರ ಇಳಿಕೆ ಮತ್ತು ಪ್ರಕ್ರಿಯೆ ಸುಧಾರಣೆಗಳನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಕೇಂದ್ರದ ಹಲವಾರು ಸಚಿವರು ಹಾಗೂ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು, “ಬಡವರು, ಮಧ್ಯಮ ವರ್ಗ, ರೈತರು, ಮಹಿಳೆಯರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಇದು ದೊಡ್ಡ ಪರಿಹಾರ. ಸಾಮಾನ್ಯ ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಈ ತೀರ್ಮಾನ ನಿಜವಾಗಿಯೂ ಪರಿವರ್ತನಾತ್ಮಕ” ಎಂದು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು “ಧೈರ್ಯಶಾಲಿ ನಿರ್ಧಾರ” ಎಂದು ಕರೆಯುತ್ತಾ, “ಜೀವನ ಮತ್ತು ವ್ಯಾಪಾರ ಸುಲಭವಾಗಲು ಈ ಸುಧಾರಣೆ ದಾರಿಯಾಗಿದೆ” ಎಂದು ಪ್ರಧಾನಿ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, “NextGen GST ಸುಧಾರಣೆಗಳು ದೇಶದಲ್ಲಿ ನಡೆಯುತ್ತಿರುವ ಪರಿವರ್ತನೆಗೆ ಬಲ ನೀಡುತ್ತವೆ” ಎಂದು…
ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಂದಣಿ ಪ್ರಕ್ರಿಯೆ ಇನ್ನಷ್ಟು ಸರಳ
ನವದೆಹಲಿ: ಸಣ್ಣ ಹಾಗೂ ಕಡಿಮೆ ಅಪಾಯದ ವ್ಯವಹಾರಗಳಿಗೆ ಜಿಎಸ್‌ಟಿ ನೋಂದಣಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಇನ್ನಷ್ಟು ಸುಲಭಗೊಳಿಸಿದೆ. ವ್ಯಾಪಾರ ಮಾಡುವ ಸುಲಭ ಸುಧಾರಣೆಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬುಧವಾರ ಸರ್ಕಾರ ತಿಳಿಸಿದೆ. ಹೊಸ ವ್ಯವಸ್ಥೆಯಡಿ, ಅರ್ಹ ಅರ್ಜಿದಾರರಿಗೆ ಕೇವಲ ಮೂರು ಕೆಲಸದ ದಿನಗಳಲ್ಲಿ ನೋಂದಣಿ ಲಭ್ಯವಾಗಲಿದೆ. ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಅಧ್ಯಕ್ಷ ಸಂಜಯ್ ಕುಮಾರ್ ಅಗರ್ವಾಲ್ ಹೇಳುವಂತೆ, ₹2.5 ಲಕ್ಷಕ್ಕಿಂತ ಹೆಚ್ಚು ಇನ್‌ಪುಟ್ ತೆರಿಗೆ ಕ್ರೆಡಿಟ್ ಪಡೆಯದ ಸಣ್ಣ ವ್ಯವಹಾರಗಳು ಈ ಸರಳೀಕೃತ ನೋಂದಣಿಯನ್ನು ಆಯ್ಕೆ ಮಾಡಬಹುದು. ಮುಂದಿನ ದಿನಗಳಲ್ಲಿ ಅವರು ವಿಸ್ತಾರಗೊಂಡು ಸಾಮಾನ್ಯ ನೋಂದಣಿಗೆ ಬಯಸಿದರೆ, ಅಪಾಯ ಮೌಲ್ಯಮಾಪನದ ಆಧಾರದ ಮೇಲೆ ಸಾಮಾನ್ಯ ವರ್ಗಕ್ಕೆ ಪರಿವರ್ತಿಸಬಹುದಾಗಿದೆ. ಮರುಪಾವತಿ ಪ್ರಕ್ರಿಯೆಗೂ ಸುಧಾರಣೆ ಮರುಪಾವತಿಗೆ ಸಂಬಂಧಿಸಿದಂತೆ ಈಗಿರುವ ವ್ಯವಸ್ಥೆಯಲ್ಲಿ ತಿದ್ದುಪಡಿ ಮಾಡಲು ಜಿಎಸ್‌ಟಿ ಕೌನ್ಸಿಲ್ ಶಿಫಾರಸು ಮಾಡಿದೆ. ತಾತ್ಕಾಲಿಕ ಆಧಾರದ…
GST ಪರಿಷ್ಕರಣೆ: ಜನಸಾಮಾನ್ಯರು ನಿರಾಳ, ಶ್ರೀಮಂತರಿಗೆ ಹೊರೆ..
ನವದೆಹಲಿ:ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಜಿಎಸ್‌ಟಿ ಪರಿಷ್ಕರಣೆಯ ಭರವಸೆ ಈಗ ಜಾರಿಯಾಗಿದೆ. ದೀಪಾವಳಿಯ ಮುನ್ನವೇ ಕೇಂದ್ರ ಸರ್ಕಾರ ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ದರಗಳನ್ನು ಇಳಿಸುವ ಮೂಲಕ ಜನತೆಗೆ “ಉಡುಗೊರೆ” ನೀಡಿದೆ. ಹೊಸ ತಿದ್ದುಪಡಿ ಪ್ರಕಾರ ಶೇಕಡಾ 5 ಮತ್ತು 18ರ ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ಮುಂದುವರಿಸಲಾಗಿದ್ದು, ಶೇಕಡಾ 12 ಹಾಗೂ 28ರ ಸ್ಲ್ಯಾಬ್‌ಗಳನ್ನು ರದ್ದುಪಡಿಸಲಾಗಿದೆ. ಇದರ ಪರಿಣಾಮವಾಗಿ ಅನೇಕ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಜೊತೆಗೆ, ಹಲವಾರು ವಸ್ತುಗಳನ್ನು ಸಂಪೂರ್ಣ ತೆರಿಗೆ ಮುಕ್ತಗೊಳಿಸಲಾಗಿದೆ. ಐಷಾರಾಮಿ ವಸ್ತುಗಳಿಗೆ 40% ತೆರಿಗೆ ಮಧ್ಯಮ ವರ್ಗ ಹಾಗೂ ಬಡವರ ಹಿತದೃಷ್ಟಿಯಿಂದ ತೆರಿಗೆ ಕಡಿತ ಮಾಡಿರುವ ಸರ್ಕಾರ, ಐಷಾರಾಮಿ ವಸ್ತುಗಳ ಮೇಲಂತೂ ತೆರಿಗೆ ಭಾರ ಹೆಚ್ಚಿಸಿದೆ. ಇದುವರೆಗೆ ಶೇಕಡಾ 28ರ ತೆರಿಗೆ ವಿಧಿಸಲಾಗುತ್ತಿದ್ದ ಐಷಾರಾಮಿ ವಸ್ತುಗಳಿಗೆ ಇನ್ಮುಂದೆ ಶೇಕಡಾ 40ರ ಜಿಎಸ್‌ಟಿ ಅನ್ವಯವಾಗಲಿದೆ. ಹೊಸ ಸ್ಲ್ಯಾಬ್‌ಗೆ ಒಳಪಡುವ ವಸ್ತುಗಳು:…
GST ಪರಿಷ್ಕರಣೆ: ಹಲವು ವಸ್ತುಗಳ ಬೆಲೆ ಇಳಿಕೆ, ಈ ವಸ್ತುಗಳಿಗೆ ತೆರಿಗೆಯೇ ಇಲ್ಲ
ನವದೆಹಲಿ: ಸ್ವಾತಂತ್ರೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಪರಿಷ್ಕರಣೆಯ ಭರವಸೆ ನೀಡಿದ್ದರು. ಅದರಂತೆಯೇ ಕೇಂದ್ರ ಸರ್ಕಾರ ಹಲವು ವಸ್ತುಗಳ ಜಿಎಸ್‌ಟಿ ದರ ಇಳಿಸುವ ಮೂಲಕ ದೇಶದ ಜನರಿಗೆ ಗುಡ್ ನ್ಯೂಸ್ ನೀಡಿದೆ. ದೀಪಾವಳಿ ಮುನ್ನ ಗಿಫ್ಟ್ ನೀಡುವುದಾಗಿ ಮೋದಿ ನೀಡಿರುವ ಭರವಸೆ ಇದೀಗ ಕಾರ್ಯರೂಪಕ್ಕೆ ಬಂದಿದೆ. ಜಿಎಸ್‌ಟಿ ಸ್ಲ್ಯಾಬ್‌ಗಳಲ್ಲಿ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಲಾಗಿದ್ದು, ಶೇ 5 ಮತ್ತು ಶೇ 18ರ ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ಉಳಿಸಿಕೊಂಡು ಶೇ 12 ಮತ್ತು ಶೇ 28ರ ಸ್ಲ್ಯಾಬ್‌ಗಳನ್ನು ರದ್ದು ಮಾಡಲಾಗಿದೆ. ಕೇಂದ್ರದ ಈ ನಿರ್ಧಾರದಿಂದಾಗಿ ಹಾಲವು ವಸ್ತುಗಳ ಬೆಲೆ ಇಳಿಕೆಯಾಗಲಿದೆ.ಇದೇ ಸಂದರ್ಭದಲ್ಲಿ ಹಲವು ವಸ್ತುಗಳನ್ನು ತೆರಿಗೆ ಮುಕ್ತ ಗೊಳಿಸಲಾಗಿದೆ. ಈ ಕೆಲವು ವಸ್ತುಗಳಿಗೆ ಜಿಎಸ್ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಈ ವರೆಗೂ ಶೇ 5 ರ ಜಿಎಸ್ಟಿ ಸ್ಲ್ಯಾಬ್ ಅಡಿ…
“ನಾನು ಸಂಪೂರ್ಣವಾಗಿ ನಕಾರಾತ್ಮಕ ಪಾತ್ರ ಮಾಡಬೇಕು”: ಅನುಷ್ಕಾ ಶೆಟ್ಟಿ
ಚೆನ್ನೈ: ತೆಲುಗು ಸಿನಿರಂಗದ ಅಗ್ರ ನಟಿ ಅನುಷ್ಕಾ ಶೆಟ್ಟಿ, ತಮ್ಮ ಮುಂದಿನ ಆಕ್ಷನ್ ಎಂಟರ್‌ಟೈನರ್ ‘ಘಾಟಿ’ ಬಿಡುಗಡೆ ಸಿದ್ಧತೆಗಳಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮುಂದಿನ ಕನಸಿನ ಪಾತ್ರದ ಬಗ್ಗೆ ಆಸಕ್ತಿಕರ ಬಹಿರಂಗಪಡಿಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅನುಷ್ಕಾ, “ನಾನು ಇನ್ನೂ ಸಂಪೂರ್ಣವಾಗಿ ನಕಾರಾತ್ಮಕ ಪಾತ್ರ ಮಾಡಿಲ್ಲ. ಆದರೆ ಬಲವಾದ ಪಾತ್ರ ಸಿಕ್ಕರೆ, ಖಂಡಿತವಾಗಿ ನಕಾರಾತ್ಮಕ ಪಾತ್ರ ಮಾಡಲು ಬಯಸುತ್ತೇನೆ” ಎಂದರು. 20 ವರ್ಷಗಳ ಯಶಸ್ವಿ ಸಿನಿಪಯಣವನ್ನು ಪೂರೈಸಿರುವ ಅನುಷ್ಕಾ, ಅರುಂಧತಿ, ರುದ್ರಮದೇವಿ, ಬಾಹುಬಲಿ ಮತ್ತು ಭಾಗಮತಿಯಂತಹ ಚಿತ್ರಗಳಲ್ಲಿ ಶಕ್ತಿಶಾಲಿ ಪಾತ್ರಗಳನ್ನು ನಿರ್ವಹಿಸಿದ್ದರು. ಘಾಟಿಯಲ್ಲಿ ಅವರು ಅಭಿನಯಿಸಿರುವ ಶೀಲಾವತಿ ಪಾತ್ರವೂ ಅಷ್ಟೇ ಪ್ರಬಲವಾಗಿದ್ದು, ಹಲವು ಹೊಸ ಛಾಯೆಗಳನ್ನು ಒಳಗೊಂಡಿದೆ ಎಂದು ಹೇಳಿದರು. “ಪ್ರತಿ ಮಹಿಳೆಯೂ ಸರಳವಾಗಿ ಕಾಣಬಹುದು, ಆದರೆ ಅವಶ್ಯಕತೆಯ ಸಮಯದಲ್ಲಿ ಬಲವಾದ ಆಧಾರವಾಗುತ್ತಾರೆ. ಕ್ರಿಶ್ ಸಾರ್ ಈ ಗುಣವನ್ನು ಹಿಡಿದುಕೊಂಡು ಶೀಲಾವತಿ ಎಂಬ ಅದ್ಭುತ…
ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಅಭಿಮಾನಿಗಳಿಗೆ ಖುಷಿಯ ಸುದ್ದಿ. ಈಗಾಗಲೇ 11 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ಈ ಶೋ, ಶೀಘ್ರದಲ್ಲೇ 12ನೇ ಸೀಸನ್ ಪ್ರೇಕ್ಷಕರ ಮುಂದೆ ಬರಲಿದೆ. ಸೆಪ್ಟೆಂಬರ್ 28, ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರು ಎಂಬ ಕುತೂಹಲ ಉಂಟಾಗಿದೆ. View this post on Instagram A post shared by Colors Kannada Official (@colorskannadaofficial) ಕಿಚ್ಚ ಸುದೀಪ್ ಅವರು ನಿರೂಪಣೆಗೆ ಸಜ್ಜಾಗಿದ್ದು, ಶೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಪ್ರೋಮೋದಲ್ಲಿ – “ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್…
ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ
ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಇನ್ನು ಮುಂದೆ ಬಿಬಿಎಂಪಿ ಬದಲು ಜಿಬಿಎ ನಗರದ ಆಡಳಿತವನ್ನು ನೋಡಿಕೊಳ್ಳಲಿದೆ. ಜಿಬಿಎ ಅಡಿಯಲ್ಲಿ . ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಹೆಸರುಗಳಲ್ಲಿ ಐದು ಹೊಸ ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಬಿಬಿಎಂಪಿಯ 198 ವಾರ್ಡ್‌ಗಳನ್ನು ಈ ಐದು ಪಾಲಿಕೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಪ್ರತಿಯೊಂದು ಪಾಲಿಕೆಗೆ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ರಚಿಸಲಾಗಿದೆ. ‘ಜಿಬಿಎ’ಗೆ ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರಿನ ಮೂವರು ಸಂಸದರು, ಹಾಗೂ ನಗರದ ಶಾಸಕರನ್ನು ಒಳಗೊಂಡಂತೆ 73 ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು: ಬೆಂಗಳೂರು…
ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ
ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಉನ್ನತ ಗೌರವ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಚಿತ್ರೋದ್ಯಮದ ಗಣ್ಯರು ಒತ್ತಾಯಿಸಿದ್ದಾರೆ. ಮಂಗಳವಾರ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಅಲ್ಲದೇ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು, ಅವರು ವಾಸಿಸುತ್ತಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆ ಕೂಡ ಮನವಿ ಮಾಡಲಾಯಿತು. ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ… pic.twitter.com/n6sLjmSm0Z — Siddaramaiah (@siddaramaiah) September 2,…
ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ
ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ…
