ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ ಪಡೆಯಲು ಜನರಿಗೆ ಯಾವುದೇ ಅಡಚಣೆ ಆಗಬಾರದು ಎಂಬ ಉದ್ದೇಶದಿಂದ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. CT ಮತ್ತು MRI ಸೇವೆ ನೀಡುತ್ತಿದ್ದ Krsnaa Diagnostics Ltd ಸಂಸ್ಥೆ ಸರಿಯಾದ ದಾಖಲೆ ಹಾಗೂ ದೃಢೀಕರಣ ಪದ್ಧತಿಗಳನ್ನು ಪಾಲಿಸದ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರ ಸ್ಕ್ಯಾನಿಂಗ್ ಪ್ರಕ್ರಿಯೆಗೆ ವ್ಯವಸ್ಥಿತ ನಿಯಮಾವಳಿ ಮತ್ತು ಪರಿಶೀಲನಾ ಕ್ರಮಗಳನ್ನು ಆಗಸ್ಟ್ 30, 2024ರಂದು ಜಾರಿಗೆ ತಂದಿತು. ಇದರ ಪರಿಣಾಮವಾಗಿ 2024ರ ಏಪ್ರಿಲ್‌ನಿಂದ 2025ರ ಡಿಸೆಂಬರ್ ತನಕ ಅಗತ್ಯವಿರುವಷ್ಟೇ ಸಿಟಿ ಸ್ಕ್ಯಾನಿಂಗ್ ನಡೆಯಿತು. ಏಪ್ರಿಲ್ 2024 ರಿಂದ ಜುಲೈ 2024ರ ಅವಧಿಯಲ್ಲಿ ಒಟ್ಟು 98,311 ಸ್ಕ್ಯಾನಿಂಗ್ ನಡೆದು, ಅದಕ್ಕೆ 15.24 ಕೋಟಿ…
Category: ಪ್ರಮುಖ ಸುದ್ದಿ
ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು
ಬಾಗಲಕೋಟೆ: ಜಮಖಂಡಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ತಾಲೂಕಿನ ಕಟ್ಟೆಕೆರೆ ಸಮೀಪ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ಗ್ರಾಮದ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಕಬ್ಬಿನ ಕಟಾವು ಕಾರ್ಯಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ…
AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ: ವರ್ಷಕ್ಕೆ 5 ಲಕ್ಷ ಪದವೀಧರರಿಗೆ ತರಬೇತಿ ಗುರಿ
ನವದೆಹಲಿ: ಕೃತಕ ಬುದ್ಧಿಮತ್ತೆ (AI) ಮತ್ತು ಆಳವಾದ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಜವಾಬ್ದಾರಿಯುತ AI ಬಳಕೆಯಲ್ಲಿ ಮಾದರಿ ರಾಜ್ಯವಾಗುವ ಗುರಿ ಹೊಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಮಾತನಾಡಿದ ಐಟಿ–ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಾಗತಿಕ ತಾಂತ್ರಿಕ ಅಡಚಣೆಗಳನ್ನು ಅವಕಾಶವನ್ನಾಗಿ ಬಳಸಿಕೊಳ್ಳಲು ಭಾರತಕ್ಕೆ, ವಿಶೇಷವಾಗಿ ಕರ್ನಾಟಕಕ್ಕೆ ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು. “ರಾಜ್ಯದಲ್ಲಿ ಕೌಶಲ್ಯ ಇನ್ಕ್ಯುಬೇಷನ್ ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಜಾಗತಿಕ ನಾಯಕರೊಂದಿಗೆ ಚರ್ಚೆ ನಡೆಯುತ್ತಿದೆ. ಇ-ಆಡಳಿತ ಕ್ಷೇತ್ರದಲ್ಲಿ ಜವಾಬ್ದಾರಿಯುತ AI ಬಳಕೆಯಲ್ಲಿ ಮುಂಚೂಣಿಯಲ್ಲಿರಲು ಸರ್ಕಾರ ಬದ್ಧವಾಗಿದೆ,” ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ದೇಶದ ಅತಿದೊಡ್ಡ AI ಪ್ರತಿಭಾ ಸಂಪನ್ಮೂಲಗಳಲ್ಲೊಂದು ಲಭ್ಯವಿದೆ ಎಂದು ಅವರು ಗಮನಿಸಿದರು. ನಾವೀನ್ಯತೆಯಲ್ಲಿ ನೈತಿಕತೆ ಅವಶ್ಯಕವೆಂದು ಒತ್ತಿಹೇಳಿದ ಖರ್ಗೆ, “ಆವಿಷ್ಕಾರ ಅಥವಾ ಬೌದ್ಧಿಕ ಸ್ವತ್ತಿನ…
ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ ನಿರ್ಧಾರಕ್ಕೆ ಕುರುಬೂರು ಶಾಂತಕುಮಾರ್ ಖಂಡನೆ
ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭಿಸಲು ಸರ್ಕಾರ ನೀಡಿರುವ ಅನುಮತಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಂಡವಾಳಶಾಹಿ ರೆಸಾರ್ಟ್ ಮಾಲೀಕರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಪ್ರಕಟಣೆಯಲ್ಲಿ, “ಅರಣ್ಯದ ಅಂಚಿನಲ್ಲಿ ವಾಸಿಸುವ ಗ್ರಾಮಗಳ ರೈತರ ಕಷ್ಟ ಅರಿಯದೆ, ಕಾಡು ಪ್ರಾಣಿಗಳ ದಾಳಿಯಿಂದಾಗುತ್ತಿರುವ ಪ್ರಾಣಹಾನಿ ಹಾಗೂ ಬೆಳೆ ನಷ್ಟವನ್ನು ಲೆಕ್ಕಿಸದೆ ಸರ್ಕಾರ ಸಫಾರಿಗೆ ಅನುಮತಿ ನೀಡಿದೆ. ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳು ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ. ಸಫಾರಿ ಕಾರ್ಯಾಚರಣೆಗಳಿಂದ ಕಾಡು ಪ್ರಾಣಿಗಳು ಭಯಭೀತಗೊಂಡು ಕಾಡಿನ ಹೊರಗೆ ಬರುತ್ತಿವೆ. ಇದರಿಂದ ಮನುಷ್ಯರ ಮೇಲೆ ದಾಳಿ ಹಾಗೂ ಬೆಳೆ ಹಾನಿ ಪ್ರಕರಣಗಳು ಹೆಚ್ಚುತ್ತಿವೆ ಎಂಬುದು ಸರ್ಕಾರಕ್ಕೂ ತಿಳಿದಿದೆ. ಆದರೂ ಆದಾಯದ ಲೆಕ್ಕಾಚಾರಕ್ಕೆ…
KSRTC ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ವೇತನ ಪರಿಷ್ಕರಣೆಗೂ ಒಪ್ಪಿಗೆ
ಬೆಂಗಳೂರು: ಮುಷ್ಕರದ ಎಚ್ಚರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾಗಿದ್ದ ವೇತನ ಬಾಕಿ ಪಾವತಿಗೆ ಕ್ರಮ ಕೈಗೊಂಡಿದೆ. ಸಾರಿಗೆ ನೌಕರರಿಗೆ ಒಟ್ಟು 38 ತಿಂಗಳ ವೇತನ ಹಿಂಬಾಕಿ ಪಾವತಿಸ ಬೇಕಿರುವುದರಿಂದ, ಪ್ರಥಮ ಹಂತದಲ್ಲಿ 26 ತಿಂಗಳ ಅರಿಯರ್ಸ್ ಪಾವತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1-1-2021ರಿಂದ 28-03-2023ರವರೆಗೆ ಬಾಕಿ ಇರುವ 26 ತಿಂಗಳ ಮೊತ್ತವನ್ನು ನೌಕರರಿಗೆ ನೀಡಲಾಗುತ್ತದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ನೌಕರರು ವೇತನ ಬಾಕಿ ಪಾವತಿಗೆ ಒತ್ತಾಯಿಸುತ್ತಿದ್ದರು. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ. ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ಹಂತ ಹಂತವಾಗಿ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದೇ…
ಮಂಗಳೂರು, ಉಡುಪಿಯಲ್ಲೂ ಹದಗೆಟ್ಟ ವಾಯು ಗುಣಮಟ್ಟ
ಬೆಂಗಳೂರು: ರಾಜ್ಯದಲ್ಲಿ ರಾಜಧಾನಿ ಮಾತ್ರವಲ್ಲದೆ ಕರಾವಳಿ ನಗರಗಳಾದ ಮಂಗಳೂರು ಮತ್ತು ಉಡುಪಿಗಳಲ್ಲೂ ವಾಯು ಗುಣಮಟ್ಟ ಹದಗೆಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಮಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 190ಕ್ಕೆ ತಲುಪಿದೆ. ಉಡುಪಿ ನಗರದಲ್ಲಿ ಇದು 181 ದಾಖಲಾಗಿದ್ದು, ಬೆಳಗಾವಿಯಲ್ಲಿ 182 ಆಗಿದೆ. ಮಲೆನಾಡು ಭಾಗದ ಶಿವಮೊಗ್ಗಯಲ್ಲೂ ಎಕ್ಯೂಐ 181ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆ ತೀವ್ರ ಕಳಪೆ ಮಟ್ಟ ತಲುಪಿದ್ದ ಬೆಂಗಳೂರು ನಗರದ ಎಕ್ಯೂಐ ಬುಧವಾರ 156ಕ್ಕೆ ಇಳಿಕೆಯಾಗಿದೆಯಾದರೂ, ಇನ್ನೂ ‘ಮಧ್ಯಮ–ಕಳಪೆ’ ವಲಯದಲ್ಲೇ ಇದೆ. ಇತರೆ ಪ್ರಮುಖ ನಗರಗಳ ಸ್ಥಿತಿಯೂ ಚಿಂತಾಜನಕವಾಗಿದೆ. ಮೈಸೂರು – 158, ಕಲಬುರ್ಗಿ – 144, ಹುಬ್ಬಳ್ಳಿ – 159 ಹಾಗೂ ವಿಜಯಪುರ – 152 ಎಕ್ಯೂಐ ದಾಖಲಾಗಿದೆ. ಗಾಳಿಯ ಗುಣಮಟ್ಟ ಕುಸಿತದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಹೆಚ್ಚುವ ಸಾಧ್ಯತೆ ಇರುವುದರಿಂದ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ…
ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು
ಕೊಪ್ಪಳ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು, ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳು. 2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಇಸ್ರೇಲ್ ಮೂಲದ ಮಹಿಳೆಯ ಅತ್ಯಾಚಾರ ನಡೆದಿತ್ತು. ಈ ವೇಳೆ ವಿದೇಶಿ ಯುವಕನ ಕೊಲೆ ಮಾಡಲಾಗಿತ್ತು. ಈ ಘಟನೆ ನಡೆದ ಕೇವಲ 9 ತಿಂಗಳಲ್ಲೇ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿತ್ತು. ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿಯ ತೀರ್ಪು ಪ್ರಕಟಿಸಿದ್ದಾರೆ.…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ
ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ 2023ರ ವಿಧಾನಸಭಾ ಚುನಾವಣೆಯ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಅರ್ಜಿಯಲ್ಲಿ, ಸುಬ್ಬಾರೆಡ್ಡಿ ಅವರು ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಸಂಪೂರ್ಣವಾಗಿ ಪ್ರಕಟಿಸದೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಆಯ್ಕೆಯನ್ನು ಅಸಿಂಧುಗೊಳಿಸುವಂತೆ ತೀರ್ಮಾನಿಸಿದೆ. ಆದರೆ, ಅರ್ಜಿದಾರರಾದ ಸಿ. ಮುನಿರಾಜು ಅವರನ್ನು ನೇರವಾಗಿ ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ. ಇದರ ನಡುವೆ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲರು ಮನವಿ ಮಾಡಿದ್ದು, ನ್ಯಾಯಾಲಯ ತನ್ನ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗುವವರೆಗೆ…
ಕಳಂಕಿತ ಬಿಜೆಪಿ ನಾಯಕರಿಂದ ಖರ್ಗೆ ಕುಟುಂಬದ ಬಗ್ಗೆ ಟೀಕೆ; ಕಾಂಗ್ರೆಸ್ ಶಾಸಕ ವ್ಯಂಗ್ಯ
ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ಶಾಸಕರೂ ಆದ ರಮೇಶ್ ಬಾಬು ಹೇಳಿದ್ದಾರೆ. ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ವಿಜಯೇಂದ್ರ ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್.ಎಸ್.ಎಸ್ ನವರು ಇವರ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಲಿ!…
RSS ಬಗ್ಗೆ ಗೇಲಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. 4 ದಶಕಗಳಿಂದ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ “ನಾಳೆ ಬಾ” ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಕಲ್ಯಾಣ ಕರ್ನಾಟಕದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರುವ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಆರ್…
