ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಶ್ರೀನಗರ: ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಈ ವರ್ಷದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಿದ್ದು, ಮೊದಲ ದಿನವೇ 12,300ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ, 6,411 ಯಾತ್ರಿಕರ ಮತ್ತೊಂದು ತಂಡ ಜಮ್ಮುವಿನ ಭಗವತಿ ನಗರ ಯಾತ್ರಾ ನಿವಾಸದಿಂದ ಕಣಿವೆಗೆ ಹೊರಟಿದೆ. ಈ ಪೈಕಿ 2,789 ಯಾತ್ರಿಕರು ಬಾಲ್ಟಾಲ್ ಮೂಲ ಶಿಬಿರಕ್ಕೆ, ಉಳಿದ 3,622 ಯಾತ್ರಿಕರು ನುನ್ವಾನ್ (ಪಹಲ್ಗಾಮ್ ಶಿಬಿರ) ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಏಪ್ರಿಲ್‌ನಲ್ಲಿ ಪಹಲ್ಗಾಮ್ ಸಮೀಪ ನಡೆದ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ, ಈ ಬಾರಿ ಯಾತ್ರೆಗೆ ಹಲವು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಸೇನೆ, ಬಿಎಸ್‌ಎಫ್‌, ಸಿಆರ್‌ಪಿಎಫ್‌, ಎಸ್‌ಎಸ್‌ಬಿ ಮತ್ತು ಸ್ಥಳೀಯ ಪೊಲೀಸರ ಜೊತೆಗೆ 180 ಹೆಚ್ಚುವರಿ ಸಿಎಪಿಎಫ್‌ ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ. ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ಸಾರಿಗೆ ಶಿಬಿರಗಳು ಹಾಗೂ ಜಮ್ಮುವಿನಿಂದ ಪವಿತ್ರ…

‘ಸಿಎಸ್ ವಿರುದ್ಧ ಅವಹೇಳನ ಮಾಡಿಲ್ಲ’: ರವಿಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರಿಷತ್ ಸಭಾಪತಿಗೆ ದೂರು ಸಲ್ಲಿಸಿದ್ದು, ಈ ಸಂಬಂಧ ಶಾಸಕ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ನಾನು ಯಾವುದೇ ಅವಹೇಳನಕಾರಿ ಭಾಷಣ ಮಾಡಿಲ್ಲ. ಜೂನ್ 30ರಂದು ನಡೆದ ಪ್ರತಿಭಟನೆ ವೇಳೆ ಸಿಎಸ್‌ ಬಗ್ಗೆ ಮಾತನಾಡಿಲ್ಲ. ಅವರು ಬ್ಯುಸಿಯಾಗಿರುವುದರಿಂದ ಭೇಟಿಯಾಗಲಾಗಿಲ್ಲ ಎಂದು ಮಾತ್ರ ಹೇಳಿದ್ದೆ. ಇದರ ಹೊರತಾಗಿ ಅವರಿಗೆ ನೇರವಾಗಿ ಕುರಿತು ಯಾವುದೇ ಅವಮಾನಕಾರಿ ಮಾತುಗಳನ್ನಾಡಿಲ್ಲ” ಎಂದು ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿರುವ ರವಿಕುಮಾರ್, ಈ ಕುರಿತು ಹರಡುತ್ತಿರುವ ಸುದ್ದಿಗಳು ದಾರಿತಪ್ಪಿಸುವ ಹಾಗೂ ದುರುದ್ದೇಶಪೂರಿತವಾಗಿವೆ ಎಂದು ಆರೋಪಿಸಿದ್ದಾರೆ. ‘ಸಿಎಂ ಭೇಟಿಗೆ ಲಭ್ಯರಾಗುತ್ತಿಲ್ಲ, ಸಿಎಸ್ ಸಿಗುತ್ತಿಲ್ಲ ಎಂದಷ್ಟೆ. ಆದರೆ, ಈ ಮಾತುಗಳನ್ನು ಅವಹೇಳನವೆಂದು ವಿವರಿಸಲಾಗುತ್ತಿದೆ. ನನ್ನ ನಿಖರ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’ ಎಂದು ರವಿಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ…

ಜುಲೈ 10ರವರೆಗೆ ಭಾರೀ ಮಳೆಯ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಮುನ್ಸೂಚನೆ ನೀಡಿದೆ. ಅದರ ಪ್ರಕಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಇತರ ಹಲವು ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದ್ದು, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ತೀವ್ರ ಮಳೆಯಾಗುವ ನಿರೀಕ್ಷೆಯಿದೆ. ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು…

ಸಿಎಂ ಬದಲಾವಣೆ ಮುಂದಿನ ದೆಹಲಿ‌ ಪ್ರವಾಸದ ಬಳಿಕ? ಸುನಿಲ್ ಕುಮಾರ್ ಮಾರ್ಮಿಕ ಪ್ರಶ್ನೆ

ಬೆಂಗಳೂರು: ಜಾತಿ ಜನಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿಲುವೇನು ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ. ಸಿ.ಎಂ ಸಿದ್ದರಾಮಯ್ಯ ತಾವೇ 5 ವರ್ಷ ಮುಖ್ಯಮಂತ್ರಿಯಾಗಿರುವುದಾಗಿ ಹೇಳಿದ್ದಾರೆ. ಬಹಳ ಸಂತೋಷ ! ಆದರೆ ಎಷ್ಟು ದಿನ ಈ ಸಂತೋಷ ಅನುಭವಿಸಬೇಕೆಂಬ ಪ್ರಶ್ನೆ ಕಾಡುತ್ತಿದೆ ಎಂದು ಸುನಿಲ್ ಕುಮಾರ್ ವ್ಯಾಖ್ಯಾನಿಸಿದ್ದಾರೆ. ‘ಜಾತಿ ಗಣತಿ ವಿಚಾರದಲ್ಲೂ ನೀವು ಹೀಗೆ ಹೇಳಿದ್ದು ಯಾರೇ ವಿರೋಧಿಸಿದರೂ ನಾನು ಜಾತಿ ಗಣತಿ ವರದಿ ಅನುಷ್ಠಾನ ಮಾಡಿಯೇ ಮಾಡುತ್ತೇನೆ ಎಂದು ಹೂಂಕರಿಸಿದ್ದಿರಿ’ ಎಂದು ಕುಟುಕಿರುವ ಶಾಸಕ ಸುನಿಲ್ ಕುಮಾರ್, ಹೈಕಮಾಂಡ್ ‘ವರದಿ ಜಾರಿ ಬೇಡ’ ಎಂದು ಕುಟುಕುತ್ತಿದ್ದಂತೆ ಬೆಕ್ಕಿನ ಮರಿಯ ಹಾಗೆ ವರದಿಯನ್ನು ತಿಪ್ಪೆಗೆ ಎಸೆದಿರಿ’ ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲೂ ಹಾಗೆಯೇ? ಎಂದು ಪ್ರಶ್ನಿಸಿದ್ದಾರೆ. ಐದು ವರ್ಷ ತಾನೇ ಸಿಎಂ ಎಂಬ ತಮ್ಮ ಹೇಳಿಕೆಯನ್ನು ‘ಮುಂದಿನ ಬದಲಾವಣೆ ದೆಹಲಿ‌ ಪ್ರವಾಸದ ಬಳಿಕ’ ಎಂದು ಅರ್ಥೈಸಿಕೊಳ್ಳಬಹುದೇ?…

‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಗ್ಗೆ ಬಿಜೆಪಿ ನಾಯಕ ರವಿಕುಮಾರ್ ನೀಡಿದ್ದಾರೆ ಎನ್ನಲಾದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ಅಸಂಸ್ಕೃತಿ ಮತ್ತು ಅನಾಚಾರದ ಹೇಳಿಕೆಗಳಿಗೆ ಈ ಪ್ರಕರಣ ಮತ್ತೊಂದು ಸೇರ್ಪಡೆಯಾಗಿದ್ದು, ನಾಚಿಕೆಗೇಡಿನ ವರ್ತನೆ, ಕೊಳಕು ಭಾಷಾ ಬಳಕೆಯ ಪು‌ನರಾವರ್ತನೆಯಾದಂತಿದೆ ಎಂದು ಟೀಕಿಸಿದ್ದಾರೆ. ವಿಧಾನ‌ಪರಿಷತ್ ಸದಸ್ಯರಾದ ರವಿಕುಮಾರ್, ಕಲಬುರಗಿ ಜಿಲ್ಲಾಧಿಕಾರಿಗಳ ಕುರಿತು ಕೆಲವು ತಿಂಗಳುಗಳ ಹಿಂದೆಯಷ್ಟೇ ಅವಹೇಳನಕಾರಿಯಾಗಿ ಮಾತನಾಡಿದ್ದು, ನ್ಯಾಯಾಲಯವು ಛೀಮಾರಿ‌ ಹಾಕಿದ ನಂತರ ಬೇಷರತ್ ಕ್ಷಮೆ‌ ಕೇಳಿದ್ದರು. ಮತ್ತೊಂದು ಪ್ರಕರಣದಲ್ಲಿ ಸಿ.ಟಿ.ರವಿ ಅವರು ಸದನದಲ್ಲಿ ಮಹಿಳಾ‌ ಮಂತ್ರಿ ಕುರಿತು ಆಡಿದ ಮಾತು ಅಸಹನೀಯ, ಸಂವೇದನಾರಹಿತ, ಸಮಾಜಕ್ಕೆ ಆಘಾತಕಾರಿಯಾದ ನಡವಳಿಕೆಯಾಗಿತ್ತು ಎಂದು ರಾಮಲಿಂಗ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ರಾಮಲಿಂಗ ರೆಡ್ಡಿ, ಈಗ ಮತ್ತೊಮ್ಮೆ ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಕುರಿತ ಹೇಳಿಕೆ…

ನರೇಂದ್ರ ಮೋದಿಗೆ ‘ದಿ ಆಫೀಸರ್ ಆಫ್ ದ ಆರ್ಡರ್‌ ಸ್ಟಾರ್‌ ಆಫ್ ಘಾನಾ’

ಅಕ್ರಾ (ಘಾನಾ): ಐದು ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಘಾನಾ ದೇಶದ ಪ್ರವಾಸ ವೇಳೆ ಗಮನಸೆಳೆದಿದ್ದಾರೆ. ಘಾನಾ ದೇಶದ ಸರ್ಕಾರ ಅಲ್ಲಿನ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆಫೀಸರ್ ಆಫ್ ದ ಆರ್ಡರ್‌ ಸ್ಟಾರ್‌ ಆಫ್ ಘಾನಾ’ ಪ್ರಶಸ್ತಿಯನ್ನು ಮೋದಿಯವರಿಗೆ ನೀಡಿ ಗೌರವಿಸಿದೆ. ಐದು ದೇಶಗಳ ಪ್ರವಾಸದಲ್ಲಿ ಮೋದಿ ಅವರು ಭೇಟಿ ನೀಡಿದ ದೇಶವೇ ಘಾನಾ. ಗುರುವಾರ ಪ್ರಧಾನಿ ತಲುಪಿದ ವೇಳೆಗೆ ಅಕ್ರಾದಲ್ಲಿನ ವಿಮಾನ ನಿಲ್ದಾಣದಲ್ಲಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮಾ ಅವರು ಸ್ವತಃ ಅವರನ್ನು ಬರಮಾಡಿಕೊಂಡು ಆತ್ಮೀಯವಾಗಿ ಸ್ವಾಗತಿಸಿದರು. ಮೋದಿಯವರ ವಿಶಿಷ್ಟ ರಾಜಕೀಯ ದೃಷ್ಟಿಕೋನ, ಜಾಗತಿಕ ಮಟ್ಟದ ನಾಯಕತ್ವ ಹಾಗೂ ಭಾರತ–ಘಾನಾ ನಡುವಿನ ದ್ವೈಪಕ್ಷೀಯ ಸಂಬಂಧಗಳನ್ನು ಬಲಪಡಿಸಿರುವ ಕೊಡುಗೆಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಘಾನಾದ ಅಧ್ಯಕ್ಷರು ತಿಳಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, “ಈ ಗೌರವವನ್ನು 140 ಕೋಟಿ…

ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

ಬೆಂಗಳೂರು, ಜು.3: ರಾಜ್ಯದಲ್ಲಿ ಮಾವು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಆಸರೆಯಾಗಿ ರಾಜ್ಯ ಸರ್ಕಾರ ₹101 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನಿರ್ದೇಶನದಂತೆ, ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಜಾರಿಗೊಂಡಿರುವ ಸರ್ಕಾರದ ಆದೇಶದಲ್ಲಿ, ಈ ಮೊತ್ತದ ಶೇ.50 ರಷ್ಟು ಹಣವನ್ನು ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯ–ಕೇಂದ್ರಗಳ ಶೇ.50–50 ಪಾಲುದಾರಿಕೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯಗಳು ಶೇ.50–50 ಪಾಲು ಹೊಂದಿದ್ದು, ಈ ಬಗ್ಗೆ ಕಳೆದ ವಾರವೇ ಆದೇಶ ಹೊರಡಿಸಲಾಗಿತ್ತು.…

ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು; ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ ಎಂದವರು ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು. ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು

ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರ; ಕರಾವಳಿ, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆಯ ಅಬ್ಬರ. ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿರುಗಾಳಿಯೊಡನೆ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜನತೆಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಅಲ್ಲದೆ, ಪ್ರವಾಹಕ್ಕೆ ಸಾದರವಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆ ನಿರೀಕ್ಷೆಯಿದೆ. ಆದರೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯಿರುವುದರಿಂದ ಅಲ್ಲಿ ಸಹ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ಜನಜೀವನಕ್ಕೆ ಅಡ್ಡಿಯುಂಟಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಪ್ರವಾಸಿಗರಿಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

ಫರಿದಾಬಾದ್: ವ್ಯಾಯಾಮದ ವೇಳೆ ಹೃದಯಾಘಾತವಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೃತ ವ್ಯಕ್ತಿಯನ್ನು ಫರಿದಾಬಾದ್‌ನ ಸೆಕ್ಟರ್-3 ರ ರಾಜಾ ನಹರ್ ಸಿಂಗ್ ಕಾಲೋನಿಯ ನಿವಾಸಿ ಪಂಕಜ್ ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ತಿಂಗಳಿಂದ ತಮ್ಮ ಸ್ನೇಹಿತ ರೋಹಿತ್ ಜೊತೆಗೆ ಸೆಕ್ಟರ್-9 ರ ಶ್ರೋಟಾ ವೆಲ್‌ನೆಸ್ ಜಿಮ್‌ಗೆ ನಿಯಮಿತವಾಗಿ ಹೋಗುತ್ತಿದ್ದವರು. ಮಂಗಳವಾರ ಬೆಳಿಗ್ಗೆ ಸುಮಾರು 10:30ಕ್ಕೆ ಪಂಕಜ್ ಹಾಗೂ ರೋಹಿತ್ ಜಿಮ್‌ಗೆ ಹಾಜರಾಗಿದ್ದು, ವ್ಯಾಯಾಮ ಆರಂಭಕ್ಕೂ ಮುನ್ನ ಪಂಕಜ್ ಕಪ್ಪು ಕಾಫಿ ಸೇವಿಸಿದ್ದರು ಎಂದು ರೋಹಿತ್ ತಿಳಿಸಿದ್ದಾರೆ. ಕೇವಲ ಎರಡು ನಿಮಿಷಗಳ ವ್ಯಾಯಾಮದ ನಂತರ ಅವರು ಕುಸಿದುಬಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.