ಮೇಕೆದಾಟು ಪಾದಯಾತ್ರೆ ಮಾಡಿದವರು ಏನು ಮಾಡುತ್ತಾರೋ ನೋಡೋಣ; ಜೆಡಿಎಸ್ ಕಾದುನೋಡುವ ತಂತ್ರ

ಬಿಜೆಪಿಗೆ ನಾನೇನು ಅಡಿಯಾಳಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ವಿರುದ್ದದ ಕಾನ್ಫ್ರೆಸ್ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿರುವ ಅವರು, ಬಿಜೆಪಿ ಪರ ವಕ್ತಾರಿಕೆ ಮಾಡುವುದಕ್ಕೆ ಅಥವಾ ಅವರ ಪರವಾಗಿ ಮಾತನಾಡುವುದಕ್ಕೆ ನಾನೇನು ಅವರ ಅಡಿಯಾಳಲ್ಲ ಎಂದರು. ವಿರೋಧ ಪಕ್ಷದ ಸಾಮಾನ್ಯ ಶಾಸಕನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ ಅಷ್ಟೇ. ಕುಮಾರಸ್ವಾಮಿಗೆ ಹೊಟ್ಟೆ ಉರಿ ಅಂತಾ ಹೇಳುತ್ತಿದಾರೆ. ನನಗೆ ಏನಾಗಿದೆಯೋ ಅದಕ್ಕೆ ಔಷಧಿ ತಗೊಳ್ತೀನಿ. ವಾಸ್ತವ ಮಾತನಾಡಿ, ಜನರಿಗೆ ಆಗುತ್ತಿರುವ ಸಂಕಟಕ್ಕೆ ನಿಮ್ಮಲ್ಲಿ ಪರಿಹಾರ ಏನಿದೆ ಎಂದು ಪ್ರಶ್ನಿಸಿದರು.

ಕಾವೇರಿ ಬಗ್ಗೆ ಕಾದು ನೋಡೋಣ:

ಕಾವೇರಿ ತಗಾದೆ ಬಗ್ಗೆ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ ಎಂದು ಕೇಳಿದ್ದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕೋರ್ಟ್ ಏನು ಹೇಳುತ್ತದೆ ಎನ್ನುವುದನ್ನು ಕಾದು ನೋಡೋಣ. ಮೇಕೆದಾಟಿನಿಂದ ಪಾದಯಾತ್ರೆ ಮಾಡಿದ್ರಲ್ಲಾ ಇವರು, ಆ ಬಗ್ಗೆ ಏನು ತೀರ್ಮಾನ ಏನು ಮಾಡುತ್ತಾರೆ ಅಂತ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Related posts