ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು, ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಂಗಳೂರು ಬಂದ್ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ನಗರ ಸ್ತಬ್ಧವಾಗಿದೆ.
ಅತ್ತ ಮಂಡ್ಯ ಜಿಲ್ಲೆಯಲ್ಲೂ ರೈತರ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಬಂಧ್ ಸಂದರ್ನ್ಹದಲ್ಲೇ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲೂ ಬಂದ್ ಆಚರಿಸಲಾಗುತ್ತಿದೆ.
ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಮಳವಳ್ಳಿ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ವ್ಯಾಪಾರ ವಹಿವಾಟು ಸ್ಥಗಿತವಾಗಿದೆ.