ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಬಂದ್ ನಡೆಸುವ ಬದಲು ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ಮೇಕೆದಾಟು ಯೋಜನೆ ಬೇಕು ಎಂದು ವಿರೋಧ ಪಕ್ಷದವರು ಅಧಿಕಾರಿಗಳಿಗೆ ಅರ್ಜಿ ಕೊಟ್ಟಿದ್ದಾರೆ. ಇಲ್ಲಿ ಕೊಟ್ಟರೆ ಏನು ಪ್ರಯೋಜನ, ಮಾಜಿ ಪ್ರಧಾನಿ ದೇವೆಗೌಡರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನೀವು ದೆಹಲಿಯಲ್ಲಿ ಹೋರಾಟ ಮಾಡಿ, ಇಲ್ಲಿ ಮಾಡಿದರೆ ಏನು ಪ್ರಯೋಜನ?” ಎಂದರು

“ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ” ಎಂದು ಆಗ್ರಹಿಸಿದರು.

ತಮಿಳುನಾಡಿನ ಜೊತೆ ಡಿ.ಕೆ.ಶಿವಕುಮಾರ್ ಅವರು ಮಾತುಕತೆ ನಡೆಸುತ್ತಿಲ್ಲ ಎಂದು ಕುಮಾರಸ್ವಾಮಿ ಅವರ ಆರೋಪಕ್ಕೆ “ರಾಜ್ಯದ ಹಿತಕ್ಕೆ ಎರಡು ಪಕ್ಷಗಳು ಒಂದಾಗಿದ್ದಾರೆ, ಈಗಲೂ ರಾಜ್ಯದ ಹಿತಕ್ಕೆ ಮೇಕೆದಾಟು ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ತರಲಿ, ಮೂರು ವರ್ಷದಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮುಗಿಸುತ್ತೇನೆ ಎಂದರು.

Related posts