ದೆಹಲಿ: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ತಮಿಳುನಾಡಿಗೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಿತು. ರಾಜ್ಯದ ಪರವಾಗಿ ಇಂದು ಆದೇಶ ಬರಬಹುದು ಎಂಬ ನಿರೀಕ್ಷೆ ಇತ್ತಾದರೂ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಜಾರಿಗೆ ತರಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಕರ್ನಾಟಕಕ್ಕೆ ನಿರ್ದೇಶಿಸಿದೆ.