ಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು : ವೃತ್ತಿಪರ ಕೋರ್ಸ್ ಗಳಿಗಾಗಿ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗಾಗಿ ಪ್ರವೇಶ ಬಯಸಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಬುಧವಾರ ಬೆಂಗಳೂರಿನಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವು ಕೆಇಎ ವೆಬ್ ಸೈಟ್ http://kea.kar.nic.in ನಲ್ಲಿ ಲಭ್ಯವಿದೆ.

ಇಂಜಿನಿಯರಿಂಗ್ ವಿಭಾಗದಲ್ಲಿನ ರಾಂಕ್ ಹೀಗಿದೆ:

  • ವಿಘ್ನೇಶ್ – ಪ್ರಥಮ,

  • ಅರ್ಜುನ್ ಕೃಷ್ಣಸ್ವಾಮಿ- ದ್ವಿತೀಯ

  • ಸಮೃದ್ಧ್ ಶೆಟ್ಟಿ – 3ನೇ ಸ್ಥಾನ,

  • ಎಸ್. ಸುಮೇಧ್ – 4ನೇ ಸ್ಥಾನ,

  • ಮಾಧವ ಸೂರ್ಯ – 5ನೇ ಸ್ಥಾನ

Related posts