ಹನೂರು ಪೊಲೀಸರ ಕಾರ್ಯಾಚರಣೆ; ಮನೆ ಹಿತ್ತಲಲ್ಲಿ ಗಾಂಜಾ ಬೆಳೆದಿದ್ದ ಖದೀಮನ ಸೆರೆ

ಚಾಮರಾಜನಗರ: ಹನೂರು ತಾಲ್ಲೂಕಿನ ಜೀರಿಗೆ ಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ಮನೆಯ ಹಿತ್ತಲಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ‌.

ತಾಲೂಕಿನ ಜೀರಿಗೆ ಗದ್ದೆ ಗ್ರಾಮದ ಮಾದೇಶ್ (35) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ತನ್ನ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ನಿರೀಕ್ಷಕ ಶಶಿಕುಮಾರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಹನೂರು ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಆರೋಪಿ ತನ್ನ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ 14 ಕೆಜಿ ಹಸಿ ಗಾಂಜಾ ಗಿಡವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಮುಖ್ಯ ಪೇದೆಗಳಾದ ರಾಘವೇಂದ್ರ ,ದೊಡ್ಡ ವೀರಶೆಟ್ಟಿ, ಚಂದ್ರು ಪೇದೆಗಳಾದ ಶಿವಕುಮಾರ್, ರಾಮಕೃಷ್ಣ, ರಾಜು, ಸಂತೋಷ್ , ತಾಲೂಕು ವೈದ್ಯಧಿಕಾರಿಗಳಾದ ಡಾ.ಪ್ರಕಾಶ್ ಹಾಗೂ ಸಹಿತ ಹನೂರು ಠಾಣೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

Related posts