ಚಾಮರಾಜನಗರ: ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ರಾಮಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೈಶಂಪಾಳ್ಯ ಗ್ರಾಮದ ಮುರುಗೇಶ್ (65) ಎಂಬ ವ್ಯಕ್ತಿ ಕೌದಳ್ಳಿ ಮಾರ್ಗವಾಗಿ ಹೊಸದೊಡ್ಡಿ ಗ್ರಾಮದ ಬಸ್ ನಿಲ್ದಾಣದ ಬಳಿ ತಮಿಳುನಾಡಿನಲ್ಲಿ ಮಾರಾಟ ಮಾಡಲು ಬಸ್ಸ್ ಗಾಗಿ ಕಾಯುತ್ತಿದ್ದಾರೆಂಬ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹಾಗೂ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಸೋಮೇಗೌಡರವರ ಮಾರ್ಗದರ್ಶನದಲ್ಲಿ ರಾಮಾಪುರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಸಂತೋಷ್ ಕಶ್ಯಪ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು 800 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮುಖ್ಯಪೇದೆ ಸಿದ್ದೇಶ್ ಪೇದೆಗಳಾದ ಬಿರಾದರ್ , ಲಿಯಾಖತ್ ಅಲಿಖಾನ್ ಪಾಲ್ಗೊಂಡಿದ್ದರು.