ಶಿಕ್ಷಕರ ದಿನಾಚರಣೆ; ಹನೂರಿನಲ್ಲಿ ಅನನ್ಯ ಆಚರಣೆ;

ಚಾಮರಾಜನಗರ : ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಶೇಷ ಸಮಾರಂಭ ನೆರವೇರಿತು. ಶಾಸಕ ಎಂ ಆರ್ ಮಂಜುನಾಥ್ ಅವರು ಜ್ಯೋತಿ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂಜುನಾಥ್, ಹನೂರು ಭಾಗದ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭೌಗೋಳಿಕವಾಗಿ ಗುಡ್ಡಗಾಡಿನಿಂದ ಕೂಡಿರುವ ಪ್ರದೇಶಗಳಲ್ಲಿ ಶಿಕ್ಷಕ ವೃತ್ತಿಯನ್ನು ನಿಷ್ಠೆಯಿಂದ ಮಾಡುತ್ತಿದ್ದೀರಿ. ಶೈಕ್ಷಣಿಕವಾಗಿ ಹಿಂದಿನ ಬಾರಿಯಂತೆ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ ಸ್ಥಾನ ಪಡೆಯುವ ಶಿಕ್ಷಕರ ಮುಂದಾಗಬೇಕು. 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಇನ್ನು ಹೆಚ್ಚಿನ ಒತ್ತನ್ನು ನೀಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಮಕ್ಕಳು ಕೂಡ ಪೈಪೋಟಿ ನಡೆಸುವುದು ಅನಿವಾರ್ಯವಾಗಿದೆ. ಶಿಕ್ಷಣಕ್ಕೆ ಬೇಕಾದ ಅಗತ್ಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಸರ್ಕಾರದ ಆದೇಶದಂತೆ ಭಾರತದ ಸಂವಿಧಾನದ ಪೂರ್ವ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಸ್ವ ಗ್ರಾಮಕ್ಕೆ ರಸ್ತೆ ಕೇಳಿದ ಪ್ರಥಮ್:

ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಮಾತನಾಡಿ, ಮುಖ್ಯಮಂತ್ರಿ, ಪ್ರಧಾನಿ ಯಾವುದೇ ಹುದ್ದೆ ಸ್ಥಾನಮಾನಗಳಲ್ಲಿರಲಿ ಅವರಿಗೆಲ್ಲ ದಾರಿದೀಪ ಶಿಕ್ಷಕರಾಗಿದ್ದಾರೆ ಎಂದರು. ಇದೇ ವೇಳೆ ತಮ್ಮ ಸ್ವಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹನೂರು ಬಂಡಳ್ಳಿ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ, ಗಿರಿ ಭತ್ಯ ಸೌಲಭ್ಯಕ್ಕಾಗಿ ,ಗುರುಭವನ ನಿರ್ಮಿಸಲು ಸ್ಥಳ ಮಂಜೂರಾತಿ ಬಗ್ಗೆ , ವಾಹನಗಳ ಕೊರತೆ ಎನ್‌ಪಿಎ ಸಮಸ್ಯೆ ಬಗ್ಗೆ ಹಾಗೂ ಇನ್ನಿತರ ಸೌಲಭ್ಯಗಳು ಬಗ್ಗೆ ಶಾಸಕರಿಗೆ ಮನವಿ ನೀಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಸ್ವಾಮಿರವರು ಭಾರತ ಸಂವಿಧಾನದ ಪುಸ್ತಕವನ್ನು ಮಾನ್ಯ ಶಾಸಕರಿಗೆ ಗೌರವಾರ್ಪಣೆಯ ಸಂದರ್ಭದಲ್ಲಿ ನೀಡಿದರು..

ನಿವೃತ್ತ ಶಿಕ್ಷಕರಿಗೆ ಸನ್ಮಾನ:

ಸಾಕಮ್ಮ ನಿರ್ಮಲ ಚಿನ್ನಮ್ಮ ಡಿಕೆ ರುದ್ರಸ್ವಾಮಿ ಶೋಭ ರಾಣಿ ರುಕ್ಮಿಣಿ ಶಿವರಾಜು ಇನ್ನಿತರ ನಿವೃತ್ತಿ ಹೊಂದಿದ ಶಿಕ್ಷಕರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶ ಕೊಟ್ಟ 24 ಶಾಲೆಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಪ್ರಶಸ್ತಿ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಸ್ವಾಮಿ, ಚಾಮರಾಜನಗರ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ವಿ,ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್, ರಾಜ್ಯ ಪರಿಷತ್ ಸದಸ್ಯ ಪ್ರಾನ್ಸಿಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಮಲ್ ದಾಸ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಅಶೋಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿನಾಯಕ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಮಲ್ಲು, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಪ್ರೌಢಶಾಲಾದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಕೆಂಪರಾಜು, ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜೋಸೆಫ್, ತಾಲ್ಲೂಕು ದೈಹಿಕ ಶಿಕ್ಷಣ ಪರಿಶೀಕ್ಷಕರಾದ ಮಹಾದೇವವರು, ಹಾಗೂ ತಾಲ್ಲೂಕಿನ ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು.

Related posts