ದೆಹಲಿ: ಭಾರತದ ಹೆಮ್ಮೆಯ ‘ಚಂದ್ರಯಾನ-3’ ಯಶಸ್ವಿಯಾಗಿದೆ. ಈ ಮೂಲಕ ಇಸ್ರೋ ಸಾಧನೆಯ ಕಿರೀಟಕ್ಕೆ ಕಿರೀಟ ಸಿಕ್ಕಿದೆ. ವಿಕ್ರಮ್ ಲ್ಯಾಂಡರ್ ಬುಧವಾರ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.
ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಕೆಲವೇ ನಿಮಿಷಗಳ ಮುನ್ನ ತೆಗೆದ ಚಿತ್ರಗಳನ್ನು ಬುಧವಾರ ಬಿಡುಗಡೆ ಮಾಡಿದೆ. ಚಂದ್ರಯಾನ-3 ರ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಲ್ಯಾಂಡಿಂಗ್ ವೇಳೆ ತೆಗೆದ ಚಂದ್ರನ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಇದೇ ವೇಳೆ, CH-3 ಲ್ಯಾಂಡರ್ ಮತ್ತು ಬೆಂಗಳೂರಿನ MOX-ISTRAC ನಡುವೆ ಸಂವಹನ ಸಂಪರ್ಕ ಸಾಧಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
Chandrayaan-3 Mission:
Updates:The communication link is established between the Ch-3 Lander and MOX-ISTRAC, Bengaluru.
Here are the images from the Lander Horizontal Velocity Camera taken during the descent. #Chandrayaan_3#Ch3 pic.twitter.com/ctjpxZmbom
— ISRO (@isro) August 23, 2023