ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ-ಜೆಡಿಎಸ್ ನಾಯಕರು ಘೋಷಿಸಿದ್ದಾರೆ.

ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಘೋಷಣೆ ಮಾಡಿದರು.

Related posts