ಚಿಕ್ಕಮಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ದೇಶವ್ಯಾಪಿ ಇಂದು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.
ಅಜಾತ ಶತ್ರು ವಾಜಪೇಯಿಯವರು ರೈತರ ಅಭ್ಯುದಯದ ಯೋಜನೆಗಳಿಗೆ ಮುನ್ನುಡಿ ಬರೆದವರು. ಈ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ರೈತರ ದಿನವಾನ್ನಾಗಿ ಬಿಜೆಪಿ ಕಾರ್ಯಕರ್ತರು ಆಚರಿಸುತ್ತಿದ್ದಾರೆ.
ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ ಗಮನಸೆಳೆಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಉಪಸ್ಥಿತಿಯಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ನಾಯಕರು ಹಾಗೂ ಕಾರ್ಯಕರ್ತರು ವಾಜಪೇಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಭಾರತ ಮಾತೆ ಪರ ಜಯಘೋಷ ಮೊಳಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಜಿ ಪ್ರಧಾನಿ ವಾಜಪೇಯಿಯವರು ತೋರಿಸಿಕೊಟ್ಟ ಮಾರ್ಗದಲ್ಲಿ ಸಾಗಿ ಪಕ್ಷವನ್ನು ಬಲಗೊಳಿಸಿ ರಾಷ್ಟ್ರ ಕಟ್ಟುವ ಕೆಲಸ ಮಾಡೋಣ ಎಂದು ಕಾರ್ಯಕರ್ತರ ಜೊತೆ ಸಂಕಲ್ಪ ಮಾಡಿದರು.