ವಿಶ್ವಸಮುದಾಯದಲ್ಲಿ ಆತಂಕ ಉಂಟುಮಾಡಿದ ಚೀನಾ-ಭಾರತ ಸಂಘರ್ಷ

ದೆಹಲಿ: ಲಡಾಖ್ ಗಡಿಯಲ್ಲಿ ಚೀನಾ ಮತ್ತು ಭಾರತ ನಡುವಿನ ಸಂಘರ್ಷ ವಿಶ್ವಸಮುದಾಯದಲ್ಲಿ ಆತಂಕ ಉಂಟುಮಾಡಿದೆ. ಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ರಾತ್ರಿ ಎರಡೂ ದೇಶಗಳ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆ ಭಾರತೀಯರನ್ನು ಕೆರಳುವಂತೆ ಮಾಡಿದೆ.

ಈ ಸಂಘರ್ಷದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ರಕ್ಷಣಾ ಪಡೆಗಳಿಗೆ ಶಸ್ತ್ರಾಸ್ತ್ರ, ಯುದ್ಧೋಪಕರಣಗಳ ಖರೀದಿಗಾಗಿ ಆರ್ಥಿಕ ಅಧಿಕಾರ ನೀಡಿದೆ. ಪ್ರಮುಖ ಶಸ್ತ್ರಾಸ್ತ್ರಗಳು ಹಾಗೂ ಯುದ್ಧೋಪಕರಣಗಳ ಖರೀದಿಸುವ ಪ್ರತಿ ಯೋಜನೆಗೆ ಗರಿಷ್ಠ 500 ಕೋಟಿ ರೂಪಾಯಿ ಮೊತ್ತದ ವರೆಗೂ ಅನುಮೋದನೆ ನೀಡಲಾಗಿದೆ.

ಈ ನಡುವೆ, ಭಾರತ-ಚೀನಾ ಗಡಿ ಸಂಘರ್ಷದ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿಯ ಸಭೆ ಕರೆದು ವಿದೇಶಾಂಗ ಕಾರ್ಯದರ್ಶಿಗಳು, ರಕ್ಷಣಾ ಇಲಾಖೆ ಕಾರ್ಯದರ್ಶಿಗಳು ಮತ್ತು ಇತರ ಉನ್ನತ ಮಟ್ಟದ ನಾಯಕರು ಗಡಿಯಲ್ಲಿ ಏನು ನಡೆಯಿತು, ಅಲ್ಲಿನ ಪರಿಸ್ಥಿತಿ ಹೇಗಿದೆ ಎಂದು ವಾಸ್ತವ ಸಂಗತಿಗಳನ್ನು ದೇಶದ ಜನತೆ ಮುಂದೆ ಬಹಿರಂಗಪಡಿಸಬೇಕೆಂದು ತಂಡ ಒತ್ತಾಯಿಸಿವೆ. ನ್ಯಾಯ ತಜ್ಞರ ತಂಡದ ಸದಸ್ಯರಾಗಿರುವ ಆರ್ ಎಸ್ ಪಿ ಸಂಸದ ಎನ್ ಕೆ ಪ್ರೇಮಚಂದ್ರನ್, ಭಾರತ-ಚೀನಾ ಸೈನ್ಯ ನಿಲುಗಡೆ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.

Related posts