ಬೆಂಗಳೂರು ಲಾಕ್’ಡೌನ್’ಗೆ ಕೈ ಶಾಸಕರ ಆಗ್ರಹ; ಸರ್ಕಾರ ನಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ದಿನೇದಿನೇ ಹೆಚ್ಚುತ್ತಿರುವ ಸೋಂಕಿರರ ಸಂಖ್ಯೆ ಆತಂಕಕಾರಿ ಬೆಳವಣಿಗೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ತೀವ್ರತರದಲ್ಲಿ ಏರಿಕೆಯಾಗುತ್ತಿವೆ.

ಈ ಆತಂಕಕಾರಿ ಬೆಳವಣಿಗೆ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದು ಬೆಂಗಳೂರಿನ ಶಾಸಕರೊಂದಿಗೆ ನಡೆಸಿದ ಸಭೆ ಗಮನಸೆಳೆಯಿತು. ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿಎಂ ಯಡಿಯೂರಪ್ಪ ಶಾಸಕರ ಸಲಹೆ ಕೇಳಿದರು.  ಪ್ರತಿಪಕ್ಷ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲಾಕ್’ಡೌನ್ ಜಾರಿಗೊಳಿಸಬೇಕೆಂದು ಸಲಹೆ ಮಾಡಿದರು. ಆದರೆ ಇದಕ್ಕೆ ಸಿಎಂ ಯಡಿಯೂರಪ್ಪ ನಿರಾಕರಿಸಿದ್ದಾರೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರಾದ ರಾಮಲಿಂಗಾ ರೆಡ್ಡಿ, ಹ್ಯಾರಿಸ್, ರಿಜ್ವಾನ್ ಅರ್ಷದ್ ಮೊದಲಾದವರು ಸರ್ಕಾರದ ನಡೆ ಬಗ್ಗೆ ಅಸಮಾಧಾನ ಹೊರಹಾಕಿದರು. ಮೊದಲು ಆಸ್ಪತ್ರೆಗಳಲ್ಲಿ ಸಕಲ ವ್ಯವಸ್ಥೆ ಮಾಡಿ ಎಂದೂ ಸರ್ಕಾರವನ್ನು ಆಗ್ರಹಿಸಿದರು.

Related posts