ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪುಟ ಸಹೋದ್ಯೋಗಿಗಳೂ ಪ್ರಮಾಣವಚನ ಸ್ವೀಕರಿಸಿದ್ದು 10 ಸದಸ್ಯರ ಸಂಪುಟ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನಸ್ವೀಕರಿಸಿದರೆ, ಡಿ.ಕೆ.ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನಟ ಕಮಲ್ ಹಾಸನ್ ಸಹಿತ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗಿಯಾಗಿದ್ದರು. ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ರಮ್ಯಾ, ಉಮಾಶ್ರೀ, ಸೇರಿದಂತೆ ಸಿನಿಮಾ ತಾರೆಯರ ಭಾಗವಹಿಸುವಿಕೆ ಕೂಡಾ ಗಮನಸೆಳೆಯಿತು.

Related posts