ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ.
ಈ ಕುರಿತಂತೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮಳೆಯಾಗಲಿದೆ ,ಎಂದು ತಿಳಿಸಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.