ಮಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್ ವಿಸ್ತರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್ ಗುರುವಾರ ಬೆಳಿಗ್ಗೆವರೆಗೆ ಜಾರಿಯಲ್ಲಿರಲಿದ್ದು, ಅನಂತರ ಮಂಗಳೂರು ಸಹಿತ ಕರಾವಳಿಯಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅಡ್ಡಿಯಿಲ್ಲ.
ಈ ಸಂಬಂಧ ಟ್ವೀಟ್ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ‘ಕರೋನಾ ನಿಯಂತ್ರಣಕ್ಕಾಗಿ ಒಂದು ವಾರಗಳ ಕಾಲ ಲಾಕ್ ಡೌನ್ ಅಲ್ಲಿ ಭಾಗವಹಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ವರಿಗೂ ಧನ್ಯವಾದಗಳು ಎಂದಿದ್ದಾರೆ. 23ನೇ ತಾರೀಕು, ಗುರುವಾರ ಬೆಳಿಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆಯಲಿವೆ. ಮಾಸ್ಕ್ ಧರಿಸೋಣ, ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ ಎಂದು ಅವರು ಸಾರ್ವಜನಿಕರೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕರೋನಾ ನಿಯಂತ್ರಣಕ್ಕಾಗಿ ಒಂದು ವಾರಗಳ ಕಾಲ ಲಾಕ್ ಡೌನ್ ಅಲ್ಲಿ ಭಾಗವಹಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ವರಿಗೂ ಧನ್ಯವಾದಗಳು. 23ನೇ ತಾರೀಕು, ಗುರುವಾರ ಬೆಳಿಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆಯಲಿವೆ.
ಮಾಸ್ಕ್ ಧರಿಸೋಣ, ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ.
— Kota Shrinivas Poojari (ಮೋದಿಜೀ ಪರಿವಾರ) (@KotasBJP) July 21, 2020