ಬೆಂಗಳೂರು: ಚಿತ್ರನಟ ಉಪೇಂದ್ರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಕೇಳಿಬಂದಿದ್ದು, ಇದೀಗ ಪ್ರಕರಣಗಳು ದಾಖಲಾಗಿವೆ. ಉಪೇಂದ್ರ ಅವರು ಫೇಸ್ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಹೋರಾಟಕ್ಕಿಳಿದಿವೆ. ಇದೇ ಸಂದರ್ಭದಲ್ಲಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ನಡುವೆ ತಮ್ಮ ಮಾತಿನ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಒಟ್ಟಾರೆ ಬೆಳವಣಿಗೆ ಬಗ್ಗೆ ನಟ ಉಪೇಂದ್ರ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಕ್ಷಮೆ ಯಾಚಿಸಿದ್ದಾರೆ. ಆದರೂ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರಕರಣಗಳೂ ದಾಖಲಾಗಿವೆ.