ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗದಲ್ಲಿ FIR; ಡಿಕೆಶಿ ಗರಂ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಕೇಳಿಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಯಲ್ಲಿ ಮೋದಿಯವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಪೋಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಟ್ವಿಟರ್ ನಲ್ಲಿ ಟೀಕಿಸಲಾಗಿದೆ. ಈ ಮೂಲಕ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಲಾಗಿದೆ ಎಂದು ವಕೀಲ ಪ್ರವೀಣ್ ಎಂಬುವವರು ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಎಎಫ್ಐಆರ್ ದಾಖಲಾಗಿದೆ.

ಡಿಕೆಶಿ ಆಕ್ರೋಶ:

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಅವರು, ಸುಳ್ಳು ದೂರು ಆಧರಿಸಿ ಎಫ್ಐಆರ್ ದಾಖಲಿಸಿರುವ ಸಾಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಜೊತೆಗೆ ಆ ಅಧಿಕಾರಿ ವಿರುದ್ಧ ಅಧಿಕಾರ ದುರುಪಯೋಗ ಕೇಸು ದಾಖಲಿಸುವಂತೆ ‌ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಶಿವಮೊಗ್ಗ ಎಸ್.ಪಿಗೆ‌ ಡಿಕೆಶಿ ಪಾತ್ರ ಬರೆದಿದ್ದಾರೆ.

ಇದನ್ನೂ ಓದಿ.. ಕಡಲತಡಿಯಲ್ಲಿ ಒಂದೇ ದಿನ ಬರೋಬ್ಬರಿ 41 ಕೇಸ್; ಕರಾವಳಿ ಜನ ಎಷ್ಟು ಸೇಫ್? 

 

Related posts