ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸಂಚು ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.
ತುಮಕೂರು ಜಿಲ್ಲೆ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಆರೋಪಿಗಳಾದ ಸೋಮ ಮತ್ತು ಅಮಿತ್ ಶರಣಾಗಿದ್ದಾರೆ. ಶಾಸಕ ರಾಜೇಂದ್ರ ಹತ್ಯೆಗೆ 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ಆಡಿಯೋ ವೈರಲ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುಪಾರಿ ಕೊಟ್ಟವರು ಯಾರು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.