ಭಾರತದಲ್ಲೂ ಕೊರೋನಾ ನರ್ತನ: ಎಲ್ಲೆಲ್ಲೂ ಕಟ್ಟೆಚ್ಚರ

ದೆಹಲಿ : ಚೀನಾದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಭೀತಿಯ ಏಲ್ ಸೃಷ್ಟಿಸುತ್ತಿದೆ. ಜೈಪುರದಲ್ಲಿರುವ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಎಂದು ದೃಢಪಟ್ಟಿದೆ. ಆತನ ಪತ್ನಿಗೂ ಸೋಂಕು ತಗುಲಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ 7 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ದೇಶದ ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿಗರನ್ನು ಆರೋಗ್ಯ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಪ್ರವಾಸಿ ಕೇಂದ್ರಗಳಲ್ಲೂ ವಿದೇಶಿಯರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ.

ಶಾಲೆಗಳಲ್ಲಂತೂ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ನೋಯ್ಡಾದ ಶಾಲೆಯ ವಿದ್ಯಾರ್ಥಿಯ ಪೋಷಕರೊಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಮೂಲಕ ಶಾಲೆಯ ಇತರೆ ವಿದ್ಯಾರ್ಥಿಗಳಲ್ಲೂ ಹರಡಿರುವ ಶಂಕೆ ಕಾಡಿದೆ. ಈ ಕಾರಣಕ್ಕಾಗಿ ಮೇರೆಗೆ ಶಾಲೆಯ ವಿದ್ಯಾರ್ಥಿಗಳ ಮೇಲೆ 28 ದಿನಗಳ ಕಾಲ ತೀವ್ರ ನಿಗಾ ಇರಿಸಲಾಗಿದೆ.

Related posts