ದೇಶದಲ್ಲಿ 5 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ದೆಹಲಿ: ಜಗತ್ತಿನ 200ಕ್ಕೂ ಹೆಚ್ಚು ದೇಶಗಳನ್ನು ನಡುಗಿಸುತ್ತಿರುವ ಅಗೋಚರ ಕೊರೋನಾ ವೈರಸ್ ಭಾರತದಲ್ಲಂತೂ ತಲ್ಲಣ ಸೃಷ್ಟಿಸಿದೆ. ದೇಶದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಇದ್ದು ಶುಕ್ರವಾರದ ವರದಿ ಬೆಚ್ಚಿ ಬೀಳಿಸುವಂತಿದೆ. ದಾಖಲೆ ಎಂಬಂತೆ ಒಂದೇ ದಿನ 18,552 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ 24 ಗಂಟೆಗಳಲ್ಲಿ 384 ಮಂದಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆಂದು ಹೇಳಿದೆ. ಭಾರತದಲ್ಲಿ ಈವರೆಗೆ ಸಾವಿನ ಸಂಖ್ಯೆ 15685ಕ್ಕೆ ತಲುಪಿದೆ.

Related posts