ಕೊರೋನಾ ಸೋಂಕಿತೆ ಸಾವು ಹಿನ್ನೆಲೆ: ಕರಾವಳಿಯಲ್ಲಿ ಸೀಲ್’ಡೌನ್ ಕ್ರಮ

ಮಂಗಳೂರು: ಕೊರೋನಾಹಾವಳಿಯಿಂದಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಆತಂಕ ಮನೆಮಾಡಿದೆ. ಅದರಲ್ಲೂ ಬಂಟ್ವಾಳದಲ್ಲಿ ಮಹಿಳೆಯೊಬ್ವರು ಕೋವಿಡ್-19 ಸೋಂಕಿಗೆ ಬಲಿಯಾದ ನಂತರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. \

ಲಾಕ್ ಡೌನ್ ಜಾರಿಯಲ್ಲಿದ್ದರೂ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನ ಓಡಾಟ ಕಂಡುಬರುತ್ತಿತ್ತು. ಕೊರೋನಾ ಸೋಂಕಿತ ಮಹಿಳೆ ಸಾವನ್ನಪಿದ ನಂತರ ಅವರ ಜೊತೆ ಸಂಪರ್ಕ ಇದ್ದವರನ್ನು ಹಾಗೂ ಪಾರ್ತೀವ ಶರೀರದ ಅಂತಿಮ ದರ್ಶನ ಪಡೆದ ಮಂದಿಯನ್ನು ಕ್ವಾರಂಟೈನ್’ನಲ್ಲಿಡಲಾಗಿದೆ.

ಇದನ್ನೂ ಓದಿ.. ಪೊಲೀಸರ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು ಗೊತ್ತಾ?

ಈ ನಡುವೆ, ಬಂಟ್ವಾಳ ಪಟ್ಟಣದ ಸೂಕ್ಷ್ಮ ಪ್ರದೇಶಗಳನ್ನು ಸೀಲ್’ಡೌನ್ ಮಾಡಲಾಗಿದೆ. ಪಟ್ಟಣದ ಕೆಲ ರಸ್ತೆಗಳನ್ನು ಮುಚ್ಚಲಾಗಿದ್ದು, ರಸ್ತೆಗಳನ್ನು ಅಗೆದು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.  ಬಂಟ್ವಾಳದಲ್ಲಿ ಕೊರೋನಾ ಪ್ರಕರಣದಲ್ಲಿ ಒಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳ ಸರಣಿ ಸಭೆಗಳನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದಾರೆ.

ತಹಶೀಲ್ದಾರ್ ರಶ್ಮಿ, ಡಿವೈಎಸ್ಪಿ ವೆಲೆಂಟಿನ್ ಡಿ’ ಸೋಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಸಹಿತ ಹಲವು ಪ್ರಮುಖರು ನಿರಂತರ ಕಾರ್ಯಾಚರಣೆಯಲ್ಲಿದ್ದು ಕೊರಾನ್ ವೈರಸ್’ನಿಂದ ಜನರನ್ನು ರಕ್ಷಿಸುವುದಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

ಬಂಟ್ವಾಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುತ್ತಿದ್ದು, ಸೀಲ್ ಡೌನ್ ಪ್ರದೇಶದ ಜನರಿಗೆ ಅವಶ್ಯಕ ಸಾಮಾಗ್ರಿ ಗಳನ್ನು ಪೂರೈಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ.. ನಟ, ನಿರೂಪಕ ಅಕುಲ್ ಬಾಲಾಜಿಗೆ ಬಂಧನ ಭೀತಿ 

 

Related posts