ಕರ್ನಾಟಕದಲ್ಲೂ ಕೊರೋನಾ ಸೋಂಕಿತರ ಮರಣ ಪ್ರಮಾಣ ಹೆಚ್ಚಳ

ಬೆಂಗಳೂರು: ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಾಣು ಕರ್ನಾಟಕದ ಜನರನ್ನು ಆತಂಕಕ್ಕೀಡುಮಾಡಿದೆ. ಶನಿವಾರ ಒಂದೇ ದಿನ 114 ಮಂದಿ ಕೋವಿಡ್-19 ವೈರಾಣು ಸೋಂಕಿನಿಂದಾಗಿ ಬಲಿಯಾಗಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚತ್ತಲೇ ಇದ್ದು ಶನಿವಾರದವರೆಗಿನ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,831ಕ್ಕೆ ಏರಿಕೆಯಾಗಿದೆ.

ಈ ನಡುವೆ ರಾಜ್ಯದಲ್ಲಿ ಶನಿವಾರ 8,818 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 2,19,926ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Related posts