ಬೆಂಗಳೂರು: ಕರುನಾಡಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರಿದಿದೆ. ಈ ವೈರಾಣು ಸೋಂಕಿಗೆ ಸೋಮವಾರ 130 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 4810ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 26 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈ ನಡುವೆ ಸೋಂಕಿನ ವೇಗವೂ ಕಡಿಮೆಯಾಗಿಲ್ಲ. ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 5851 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರು ನಗರವೊಂದರಲ್ಲೆ 1918 ಹೊಸ ಪ್ರಕರಣಗಳು ಸೋಮವಾರ ವರದಿಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,83,665ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.