ರಾಜ್ಯದಲ್ಲಿ ಕೊರೋನಾ ತಲ್ಲಣ; ಮತ್ತೆ 317 ಮಂದಿಯಲ್ಲಿ ಸೋಂಕು

ಕೋವಿಡ್-19 ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಇವೆ. ಕರ್ನಾಟಕದಲ್ಲಿ ಮಂಗಳವಾರ ಮತ್ತೆ 317 ಹೊಸ ಪ್ರಕರಣಗಳು ವರದಿಯಾಗಿದ್ದು ಕರುನಾಡಿನ ಜನರಲ್ಲಿ ಆತಂಕ ಹೆಚ್ಚಿದೆ.

ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ ಈ ಕುರಿತಂತೆ ಮಾಹಿತಿ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ರಾಜ್ಯದಲ್ಲಿ ಸೋಮವಾರ ಹಾಗೂ ಮಂಗಳವಾರ ನಡುವೆ 7 ಸೋಂಕಿತರು ಮೃತಪಟ್ಟಿದ್ದು, ವೈರಸ್ ಗೆ ಬಲಿಯಾದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಿದೆ.

Related posts