ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿ ನಿರಾಳ

ಬೆಂಗಳೂರು; ಅಗೋಚರ ಕೊರೋನಾ ವೈರಾಣು ಬಗ್ಗೆ ಆತಂಕದಲ್ಲಿದ್ದ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿ ಈಗ ನಿರಾಳರಾಗಿದ್ದಾರೆ.

ಕೃಷ್ಣಾದಲ್ಲಿ ಕರ್ತವ್ಯನಿರತ ಮಹಿಳಾ ಪೇದೆಯ ಪತಿಯಲ್ಲಿ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಚಟುವಟಿಕೆಗಳನ್ನು ಸ್ತಬ್ಧಗೊಳಿಸಲಾಗಿತ್ತು. ಸಿಎಂ ಅವರ ಕೆಲಸ ಕಾರ್ಯ ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿತ್ತು. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ಸೀಲ್’ಡೌನ್ ಆಗಿದ್ದರಿಂದ ಸಾರ್ವಜನಿಕರ ಪ್ರವೇಶ ನಿರಾಕರಿಸಲಾಗಿತ್ತು.

ಇದೀಗ ಮಹಿಳಾ ಪೇದೆಯನ್ನೂ ಪರೀಕ್ಷೆಗೆ ಗುರಿಪಡಿಸಲಾಗಿದ್ದು ಕೊರೋನಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೂಡಿದ ಆತಂಕ ದೂರವಾಗಿದೆ. ಜೊತೆಗೆ ಎಲ್ಲ ಚಟುವಟಿಕೆಗಳು ಮೊದಲಿನಂತೆ ಪ್ರಾರಂಭಗೊಂಡಿವೆ.

Related posts