ಬೆಂಗಳೂರು: ಕೊರೋನಾ ವೈರಸ್ ಹಾವಳಿ ನಿಯಂತ್ರಣಕ್ಕೆ ಸರ್ಕಾರದ ಜೊತೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಸರ್ಕಾರದ ಆದೇಶಗಳನ್ನು ಎಲ್ಲರೂ ಪಾಲಿಸೋಣ ಎಂದು ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ.
ಫೇಸ್ ಬುಕ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು ಎಂದು ಅವರು ಹೇಳಿದ್ದಾರೆ.
ದರ್ಶನ್ ಹಾಕಿರುವ ಪೋಸ್ಟ್ ಹೀಗಿದೆ.
ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.’Common sense is not common’ ಎನ್ನುವ ಹಾಗೆ ಮಾಡಬೇಡಿ.
Please behave like a responsible citizen of the country.
ನಿಮ್ಮ ದಾಸ ದರ್ಶನ್
Related