ಕರುಣಾದಲ್ಲಿ ಕೊರೋನಾ ತಲ್ಲಣ; ಹೆಚ್ಚುತ್ತಿರುವ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಭಾನುವಾರ 5,985 ಪ್ರಕರಣಗಳು ಪತ್ತೆಯಾಗಿದ್ದು ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 107 ಮಂದಿ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದಾಗಿ ಆವನ್ನಪ್ಪಿದವರ ಸಂಖ್ಯೆ 3,198ಕ್ಕೆ ಏರಿಕೆಯಾಗಿದೆ.

ಈ ನಡುವೆ ರಾಜ್ಯದಲ್ಲಿ 5,985 ಕೊರೋನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 1,948 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,78,087ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Related posts