ಮಹಾರಾಷ್ಟ್ರದಲ್ಲಿ ಒಂದೇ ದಿನ 3214 ಸೋಂಕು; 248 ಸೋಂಕಿತರು ಮಂದಿ ಸಾವು

ಮುಂಬೈ: ದೇಶಾದ್ಯಂತ ಕೊರೋನಾ ವೈರಾಣು ಸವಾರಿ ತೀವ್ರಗೊಂಡಿದ್ದು ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇವೆ. ಅದರಲ್ಲೂ ಮಹಾರಾಷ್ಟ್ರದ ಬೆಳವಣಿಗೆ ಆತಂಕ ಉಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 3214 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಅಷ್ಟೇ ಅಲ್ಲ 248 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1,39,010ಕ್ಕೆ ಏರಿಕೆಯಾಗಿದೆ. ಜೊತೆಗೆ ವೈರಸ್ ಗೆ ಬಲಿಯಾದವರ ಸಂಖ್ಯೆ 6531ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

Related posts