ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹಾಗೂ ಸೋಂಕಿತರ ಮರಣದ ಪ್ರಮಾಣ ಹೆಚ್ಚುತ್ತಲೇ ಇವೆ. ಸೋಮವಾರ ಒಂದೇ ದಿನದಲ್ಲಿ ಅಂದರೆ ಮಂಗಳವಾರ ಬೆಳಗ್ಗಿನ ವರೆಗೆ 24 ತಾಸುಗಳಲ್ಲಿ ವಿವಿಧ ರಾಜ್ಯಗಳಲ್ಲಿ ಸುಮಾರು 28,498 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ ದಾಟಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ದೇಶದಾದ್ಯಂತ 553 ಜನರು ಸಾವನ್ನಪ್ಪಿದ್ದಾರೆಂದು ಹೇಳಿದೆ. ಇದರೊಂದಿಗೆ ದೇಶದಲ್ಲಿ ಈ ವರೆಗೆ ಕೋವಿಡ್-೧೯ ಸೋಂಕಿಗೊಳಗಾಗಿ ಬಲಿಯಾದವರ ಸಂಖ್ಯೆ 23,727ಕ್ಕೆ ತಲುಪಿದೆ ಎಂದು ಹೇಳಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಮತ್ತೆ 6497, ತಮಿಳುನಾಡಿನಲ್ಲಿ 4328, ಕರ್ನಾಟಕದಲ್ಲಿ 2738, ಆಂಧ್ರಪ್ರದೇಶದಲ್ಲಿ 1935, ಉತ್ತರಪ್ರದೇಶದಲ್ಲಿ 1654, ಪಶ್ಚಿಮ ಬಂಗಾಳದಲ್ಲಿ 1435 ಹಾಗೂ ದೆಹಲಿಯಲ್ಲಿ 1246 ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಕರ್ನಾಟಕದಲ್ಲಿ 73, ತಮಿಳುನಾಡಿನಲ್ಲಿ 66, ದೆಹಲಿಯಲ್ಲಿ 40, ಆಂಧ್ರಪ್ರದೇಶದಲ್ಲಿ 37 ಮಂದಿ ಸಾವನ್ನಪಿದ್ದಾರೆಂದೂ ಮೂಲಗಳು ತಿಳಿಸಿವೆ.