ದೆಹಲಿ: ಭಾರತದಲ್ಲಿ ಕೊರೋನಾ ವೈರಾಣು ಅಟ್ಟಹಾಸ ಮುಂದುವರಿದಿದೆ. ಗುರುವಾರದಿಂದೀಚೆಗೆ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ 20,903 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದು ಕೊರೋನಾ ಸಂಕಟಕಾಲದಲ್ಲಿನ ದಾಖಲೆಯ ಸಂಖ್ಯೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಅಂಕಿ ಅಂಶ ಒದಗಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೇಶದಲ್ಲಿಸೋಂಕಿತರ ಸಂಖ್ಯೆ 6,25,544ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಜೊತೆಗೆ ಒಂದೇ ದಿನ 379 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಕೊರೋನಾ ಸೋಂಕಿಗೊಳಗಾಗಿ ಸಾವನ್ನಪ್ಪಿದವರ ಸಂಖ್ಯೆ 18213ಕ್ಕೆ ತಲುಪಿದೆ ಎಂದು ಇಲಾಖೆ ಹೇಳಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ 125 ಮಂದಿ ಬಲಿಯಾಗಿದ್ದಾರೆ. ತಮಿಳುನಾಡಿನಲ್ಲಿ 57, ದೆಹಲಿಯಲ್ಲಿ 61, ಕರ್ನಾಟಕದಲ್ಲಿ 19 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 16, ಜಮ್ಮು ಮತ್ತು ಕಾಶ್ಮೀರದಲ್ಲಿ 10, ಮಧ್ಯಪ್ರದೇಶದಲ್ಲಿ 8 ಮಂದಿ ಸೋಂಕಿತರು ಬಲಿಯಾಗಿದ್ದಾರೆ.