ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಸೋಮವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 5324 ಪಾಸಿಟಿವ್ ಪ್ರಕರಣಗಳು ಹೊಸದಾಗಿ ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ 1470 ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿಯಲ್ಲಿ 840, ಕಲಬುರಗಿಯಲ್ಲಿ 631 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ 296, ಉಡುಪಿಯಲ್ಲಿ 225, ಧಾರವಾಡದಲ್ಲಿ 193, ಬೆಳಗಾವಿಯಲ್ಲಿ 155, ಕೋಲಾರದಲ್ಲಿ 142, ಬೆಂಗಳೂರು ಗ್ರಾಮಾಂತರದಲ್ಲಿ 138 ಪ್ರಕರಣಗಳು ಪತ್ತೆಯಾಗಿವೆ. ರಾಯಚೂರಿನಲ್ಲಿ 120, ದಕ್ಷಿಣ ಕನ್ನಡದಲ್ಲಿ 119, ವಿಜಯಪುರ 110, ದಾವಣಗೆರೆಯಲ್ಲಿ 110 ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಮಹಾಮಾರಿಗೆ ಸೋಮವಾರ 75 ಮಂದಿ ಬಲಿಯಾಗಿದ್ಧಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾಗಿ ಮೃತಪಟ್ಟವರ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಹೆಲ್ತ್ ಬುಲೆಟಿನ್’ನಲ್ಲಿ ಮಾಹಿತಿ ಬಹಿರಂಗಪಡಿಸಿದೆ.
ರಾಜ್ಯದಲ್ಲಿ ಇಂದು 5,324 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,470 ಪ್ರಕರಣಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 28,224 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ ಒಟ್ಟು 12,05,051 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,847 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 784 ಜನ ಗುಣಮುಖ ಹೊಂದಿದ್ದಾರೆ. pic.twitter.com/3p2EJLRdVo
— Dr Sudhakar K (Modi ka Parivar) (@DrSudhakar_) July 27, 2020