ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಇತ್ತೀಚಿನ ದಿನಗಳಲ್ಲಿ ಪ್ರತೀ ದಿನ 5 ಸಾವಿರಕ್ಕೂ ಹೆಚ್ಚು ಹೊಸ ಕೇಸ್’ಗಳು ಪತ್ತೆಯಾಗುತ್ತಿವೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿನ ವೇಗ ಆತಂಕಕಾರಿ ಎಂಬಂತಿದೆ. ರಾಜ್ಯದಲ್ಲಿ ಬುಧವಾರ 5503 ಹೊಸ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು 92 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ.
ಬೆಂಗಳೂರಿನಲ್ಲಿ 50 ಸಾವಿರ ಕೇಸ್:
ಬೆಂಗಳೂರಿನಲ್ಲಿ ಬುಧವಾರ 2270 ಮನದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 51,091ಕ್ಕೆ ಏರಿಕೆಯಾಗಿದೆ. ಈ ಪೈಕಿ 36,224 ಸಕ್ರಿಯ ಪ್ರಕರಣಗಳಿವೆ.
ಇದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 67447 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 369 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
https://twitter.com/DHFWKA/status/1288452782416998401