ಕೊರೋನಾ ಸೋಂಕಿತೆ ಸಾವು ಹಿನ್ನೆಲೆ: ಕರಾವಳಿಯಲ್ಲಿ ಹೈ ಅಲರ್ಟ್

ಮಂಗಳೂರು: ಕೊರೋನಾ ಇದೀಗ ಕರಾವಳಿ ಜಿಲ್ಲೆಯಲ್ಲೂ ಆತಂಕ ಉಂಟುಮಾಡಿದೆ. ಬಂಟ್ವಾಳದಲ್ಲಿ ಮಹಿಳೆಯೊಬ್ವರು ಕೋವಿಡ್-19 ಸೋಂಕಿಗೆ ಬಲಿಯಾದ ನಂತರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂಟ್ವಾಳ ಪಟ್ಟಣದ ಸೂಕ್ಷ್ಮ ಪ್ರದೇಶದ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿದ್ದು, ಕೆಲವರಿಗೆ ಕ್ವಾರಂಟೈನ್ ಅಗತ್ಯದ ಬಗ್ಗೆ ಅಧಿಕಾರಿಗಳು ಸಲಹೆ ಮಾಡಿದ್ದಾರೆ.

ಈ ನಡುವೆ, ಬಂಟ್ವಾಳದಲ್ಲಿ ಕೊರೋನಾ ಪ್ರಕರಣದಲ್ಲಿ ಒಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ತಹಶೀಲ್ದಾರ್ ರಶ್ಮಿ, ಡಿವೈಎಸ್ಪಿ ವೆಲೆಂಟಿನ್ ಡಿ’ ಸೋಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

ಬಂಟ್ವಾಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವುದು, ಸೀಲ್ ಡೌನ್ ಪ್ರದೇಶದ ಜನರಿಗೆ ಅವಶ್ಯಕ ಸಾಮಾಗ್ರಿ ಗಳನ್ನು ಪೂರೈಸುವ ಸಂಬಂಧ ಸೂಕ್ತ ಕ್ರಮ ಕೈಗೋಳ್ಳುವುದು. ಕರೋನಾ ಪ್ರಕರಣ ಕಂಡು ಬಂದ ವ್ಯಾಪ್ತಿಯಲ್ಲಿ ನಿರಂತರ ಆರೋಗ್ಯ ತಪಾಸಣೆ ನಡೆಸುವುದೂ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು‌ ಅಧಿಕಾರಿಗಳಿಗೆ ಸಂಸದರು ಹಾಗೂ ಶಾಸಕರು ಸಲಹೆ ನೀಡಿದರು. ಇದೇ ವೇಳೆ .
ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆಗೆ ಸೂಚಿಸಿದರು.

Related posts