ಕೊರೋನಾ : ಕರ್ನಾಟಕ ಸೇಫ್

ಬೆಂಗಳೂರು: ಭಾರತದಲ್ಲಿ ನಿನ್ನೆ ಒಂದೇ ದಿನದಲ್ಲಿ 50ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ. ಆದರೆ ಕರ್ನಾಟಕದಲ್ಲಿ ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ. ಆದರೂ ಕೂಡಾ ತೀವ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ನೆರೆಯ ಕೇರಳಕ್ಕೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಆರು ಮಂದಿಗೆ ಕೋವಿಡ್‌ ೧೯ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು ಮತ್ತು ಮಂಗಳೂರು ನಡುವೆ ಸಂಪರ್ಕ ಕಡಿದುಕೊಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚರಿಸುವ ಕಾರಣ ಮುಂಜಾಗ್ರತಾ ಕ್ರಮವಾಗಿ ಎಲ್ಲ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನೊಂದೆಡೆ, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೇತುಮೊಟ್ಟೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್‌ 19 ತಗಲಿರುವ ಹಿನ್ನೆಲೆಯಲ್ಲಿ ಆ ಊರನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ.

Related posts