ರಾಮನಗರ: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ರಾಮನಗರದಲ್ಲಿರುವ ಕೋವಿಡ್-19 ಆಸ್ಪತ್ರೆಯು ಬಹುತೇಕ ಭಾರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಾಲ್ಲೂಕುಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೆರವಿನಿಂದ ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗುತ್ತಿದೆ.
ರಾಮನಗರ ಜಿಲ್ಲೆಯಲ್ಲಿನ ಕೋವಿಡ್ ಸೆಂಟರ್’ಗಳ ಸ್ಥಿತಿಗತಿ ಹಾಗೂ ವ್ಯವಸ್ಥೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರಿಗೆ ಮಾಹಿತಿ ನೀಡಿರು. ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಮೊದಲ ಹಂತದಲ್ಲಿ ದೊಡ್ಡ ಮರಳವಾಡಿಯಲ್ಲಿ 118 ಹಾಸಿಗೆಗಳ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಇನ್ನು ಮುಂದೆ ಈ ಭಾಗದಲ್ಲಿನ ಕೋವಿಡ್ ಸೋಂಕಿತರಿಗೆ ಇಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಾಗಡಿಯಲ್ಲೂ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರನ್ನು ಇನ್ನೆರಡು ದಿನಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.