ಕೊರೋನಾ ಸೋಂಕಿತರ ಮೇಲೆ ದುಬಾರಿ ಬಿಲ್ ಪ್ರಯೋಗ; ಸಚಿವ ಡಾ.ಸುಧಾಕರ್ ಕೆಂಡಾಮಂಡಲ

ಬೆಂಗಳೂರು: ಕೊರೋನಾ ವಾವಳಿಯಿಂದಾಗಿ ರಾಜ್ಯದ ಜನ ತತ್ತರಿಸಿದ್ದು ಚಿಕಿತ್ಸೆಗಾಗಿ ಸೋಂಕಿತರು ಪರದಾಡುವಂತಾಗಿದೆ ಎಂಬ ಅಸಮಾಧಾನದ ಮಾತುಗಳು ಹರಿದಾಡುತ್ತಿವೆ. ಇನ್ನೊಂದೆಡೆ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪಗಳೂ ಪ್ರತಿಧ್ವನಿಸಿವೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ರಾಜರಾಜೇಶ್ವರಿನಗರ ಖಾಸಗಿ ಆಸ್ಪತ್ರೆಯಲ್ಲಿನ ಅವಾಂತರ ಬಗ್ಗೆ ಐಜಿಪಿ ಡಿ.ರೂಪಾ ಸಿಡಿಮಿಡಿಗೊಂಡು ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಬೆಚ್ಚಿದ ಆಸ್ಪತ್ರೆ ರೋಗಿಗಳಿಂದ ಪಡೆದಿರುವ ಹೆಚ್ಚುವರಿ ಹಣವನ್ನು ವಾಪಸ್ ಮಾಡಿದೆ.
ಈ ನಡುವೆ, ಬೆಂಗಳೂರಿನ ಶೇಷಾದ್ರಿಪುರಂನ ಆಸ್ಪತ್ರೆ ಕೂಡಾ ಸುದ್ದಿಯಲ್ಲಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ.. ಪ್ರಭಾವಿಗಳ ಆಸ್ಪತ್ರೆಗಳನ್ನೇ ನಡುಗಿಸಿದ ಕನ್ನಡತಿ ಐಪಿಎಸ್ ಅಧಿಕಾರಿ

ಈ ಬಗ್ಗೆ ಮಾಹಿತಿ ಪಡೆದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆ ಆಸ್ಪತ್ರೆಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸಚಿವರೇ ಟ್ವೀಟ್ ಮಾಡಿದ್ದಾರೆ. ‘ಬೆಂಗಳೂರಿನ ಶೇಷಾದ್ರಿಪುರಂನ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು’ ಎಂದು ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದು, ವಿವಾದ ಕುರಿತಂತೆ ಸ್ಪಷ್ಟನೆ ನೀಡುವ ಪ್ರಯತ್ನ ಆಸ್ಪತ್ರೆ ಕಡೆಯಿಂದ ನಡೆದಿದೆ. ಈ ಬಗ್ಗೆ ಆಸ್ಪತ್ರೆಯವರು ಸಚಿವರಿಗೆ ಪತ್ರ ಬರೆದಿದ್ದು ಸೇವೆಯ ವಿಚಾರದಲ್ಲಿ ತಮ್ಮ ಪಾರದರ್ಶಕತೆಯ ಹೇಗಿದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಈ ಪತ್ರವನ್ನು ಸಚಿವ ಡಾ.ಸುಧಾಕರ್ ಅವರು ಟ್ವಿಟರ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಹಬ್ಬಾಸ್ ರೂಪ.. ಪ್ರಭಾವಿಗಳಲ್ಲೇ ನಡುಕ ಹುಟ್ಟಿಸಿದ ಐಜಿಪಿಗೆ ಅಭಿನಂದನೆಗಳ ಮಹಾಪೂರ

Related posts