ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೊರೊನಾ ಲಸಿಕೆ: 2ನೇ ಹಂತದಲ್ಲಿ 2 ಕೋಟಿ ಜನರಿಗೆ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಈವರೆಗೆ 1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2 ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ. 8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ. ಒಟ್ಟು 7,72,591 ಆರೋಗ್ಯ ಸಿಬ್ಬಂದಿ ಇದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

Related posts