ಭಾರತದಲ್ಲಿ ಕೊರೋನಾ ಸೋಂಕು ಸಮುದಾಯ ಪ್ರಸರಣ ಹಂತದಲ್ಲಿಲ್ಲ; ಕೇಂದ್ರ ಸ್ಪಷ್ಟನೆ

ದೆಹಲಿ: ದೆಹಲಿಯಲ್ಲಿ ಕೊರೋನಾ ಸೋಂಕು ಸಮುದಾಯ ಪ್ರಸರಣ ಹಂತಕ್ಕೆ ತಲುಪಿದೆ ಎಂಬ ಆಮ್ ಆದ್ಮಿ ನಾಯಕರ ಹೇಳಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ದೆಹಲಿ ಮತ್ತು ಮುಂಬೈನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಇದನ್ನೇ ಉಲ್ಲೇಖಿಸಿ ದೇಶದಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ತಲುಪಿದೆ ಎಂಬ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಪ್ರಧಾನ ನಿರ್ದೇಶಕ ಬಲರಾಮ್‌ ಭಾರ್ಗವ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಪರಿಗಣಿಸಿಲ್ಲ. ಇತರ ದೇಶಗಳಿಗೆ ಹೋಲಿಸಿದಲ್ಲಿ ಸೋಂಕು ಹರಡುವಿಕೆ ಭಾರತದಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಇದೆ ಎಂದು ಅವರು ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ಅಂಕಿ-ಅಂಶಗಳನ್ನು ಒದಗಿಸಿದ್ದಾರೆ.

Uncategorized

Related posts