ಭಾರತದಲ್ಲೂ ಕೊರೋನಾ ವ್ಯಥೆಯ ಕಥೆ

ದೆಹಲಿ: ಚೀನಾದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ವ್ಯಥೆಯ ಕಥೆಯಾಗಿದೆ. ಕರ್ನಾಟಕದಲ್ಲಷ್ಟೇ ಅಲ್ಲ ಮಹಾರಾಷ್ಟ್ರದಲ್ಲೂ ಟೆಕ್ಕಿಗಳ ಪಾಳಯದಲ್ಲಿ ಕೊರೋನಾ ಭೀತಿ ಆವರಿಸಿದೆ. ದೆಹಲಿ, ಮಹಾರಾಷ್ಟ್ರ, ರಾಜಸ್ಥಾನದಲ್ಲಿ  ಮತ್ತಷ್ಟು ಕರೋನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ಭಾರತದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ 68 ಕ್ಕೇರಿದೆ.

ಮುಂಬೈನಲ್ಲಿ ಮತ್ತೆರಡು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಡೆಲ್ ಮತ್ತು ಮೈಂಡ್ ಟ್ರೀ ಕಂಪೆನಿಗಳ ಇಬ್ಬರು ಉದ್ಯೋಗಿಗಳಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ದೆಹಲಿ ಮತ್ತು ರಾಜಸ್ಥಾನ ರಾಜ್ಯಗಳಲ್ಲೂ ಹೊಸ ಪ್ರಕರಣಗಳು ಪತ್ತೆಯಾಗಿವೆ.

ವಿದೇಶಗಳಿಗೆ ಭೇಟಿನೀಡಿ ವಾಪಸಾಗಿರುವ ಮಂದಿಯೇ ಕೊರೋನಾ ಸೋಂಕಿಗೊಳಗಾಗುತ್ತಿದ್ದಾರೆ. ಕೊರೋನಾ ವೈರಸ್ ಕಬಂದ ಬಾಹುಗಳನ್ನು ಚಾಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

Related posts