ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು

ಮಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ಕರಾವಳಿಯಲ್ಲಿ ವೈದ್ಯ ಸಮೂಹಕ್ಕೂ ಪರಿಸ್ಥಿತಿ ಸವಾಲಾಗಿದೆ. ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.

ಮಂಗಳೂರಿನ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಖಾಸಗಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ೨೮ ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು ಮತ್ತು 27 ವರ್ಷದ ಇಬ್ಬರು ಯುವತಿಯರು ಸೋಂಕಿಗೆ ಒಳಗಾಗಿದ್ದಾರೆ. ವೈದ್ಯರು ಸೋಂಕಿಗೊಳಗಾಗಿರುವ ಹಿನ್ನೆಲೆಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿ ಸುಮಾರು 30 ಮಂದಿಯನ್ನು ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.

Related posts