ಬೆಂಗಳೂರು: ಚೀನಾದಲ್ಲಿ ಸಾವಿರಾರು ಜನರನ್ನು ಬಲಿತೆಗೆದುಕೊಂಡಿರುವ ಕೊರೋನಾ ಸೋಂಕು ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದಲ್ಲೂ ಹಲವಾರು ಶಂಕಿತ ಪ್ರಕರಣಗಳು ಭೀತಿ ಉಂಟುಮಾಡಿದ್ದು ಸರ್ಕಾರ ಕೂಡಾ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಬೇಕಾದ ಔಷಧ, ಸ್ವಚ್ಚತೆ, ಸ್ಯಾನಿಟೇಷನ್, ಮತ್ತಿತರೆ ಅಗತ್ಯ ಉಪಕರಣಗಳ ಖರೀದಿಗೆ ಎನ್.ಡಿ.ಆರ್.ಎಫ್ ಹಣ ಬಳಸಲು ಸರ್ಕಾರ ಸೂಚಿಸಿದೆ. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಎನ್.ಡಿ.ಆರ್.ಎಫ್ ಮೀಸಲು ಹಣದಲ್ಲಿ ಶೇ.25 ರಷ್ಟು ಹಣ ಬಳಸಲು ಕೇಂದ್ರ ಅನುಮತಿ ನೀಡಿದೆ. ಅದನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಎಸ್ ಡಿಆರ್ ಎಫ್ ನ 84 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ. ಅದನ್ನು ವಿನಿಯೋಗ ಮಾಡಲು ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಎಂದರು.