ಕ್ವಾರಂಟೈನ್ ತಂದ ಬೇಸರ; ಯುವಕ ಆತ್ಮಹತ್ಯೆ

ಬೀದರ್: ಕೊರೋನಾ ವಿಚಾರ ಜನರ ಆತ್ಮಸ್ಥೈರ್ಯವನ್ನೇ ಕುಗ್ಗಿಸುತ್ತಿದೆಯೇ? ಹಲವಾರು ಸನ್ನಿವೇಶಗಳನ್ನು ಗಮನಿಸಿದರೆ ಇಂಥದ್ದೊಂದು ಅನುಮಾನ ವ್ಯಕ್ತವಾಗುತ್ತಿದೆ.

ಇದಕ್ಕೆ ಉದಾಹರಣೆ ಎಂಬಂತೆ ರಾಜ್ಯದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಬೀದರ್ ಜಿಲ್ಲೆ ಔರಾದ್ ಬಳಿ ಕ್ವಾರಂಟೈನ್‍ನಲ್ಲಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ಮಹಾರಾಷ್ಟ್ರದಿಂದ ವಾಪಾಗಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗ್ಗೆ ಇ ಘಟನೆ ನಡೆದಿದೆ. ಮಹಾರಾಷ್ಟ್ರದ ಮುಂಬೈನಿಂದ‌ ತನ್ನ ಪತ್ನಿಯೊಂದಿಗೆ ಜಿಲ್ಲೆಗೆ ವಾಪಸ್ಸಾದ ಹಿನ್ನೆಲೆಯಲ್ಲಿ ದಂಪತಿಯನ್ನು ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಈತ ನೇಣಿಗೆ ಶರಣಾಗಿದ್ದಾನೆನ್ನಲಾಗಿದೆ.

ಮೃತ ವ್ಯಕ್ತಿ ನಾರಾಯಣಪುರ ಗ್ರಾಮದವನೆನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts