ದೇಶದಲ್ಲಿ ಕೊರೋನಾ ತಲ್ಲಣ; ಸೋಂಕಿತರ ಸಂಖ್ಯೆ 4 ಲಕ್ಷಕ್ಕೂ ಹೆಚ್ಚು

ದೆಹಲಿ: ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೋನಾ ವೈರಾಣು ಭಾರತದಲ್ಲಿ ಶರವೇಗದಲ್ಲಿ ಹಬ್ಬುತ್ತಿದ್ದು ಸೋಂಕಿತರ ಸಂಖ್ಯೆ ಸೋಂಕಿತರ ಸಂಖ್ಯೆ 4.10 ಲಕ್ಷಕ್ಕೆ ಏರಿಕೆಯಾಗಿದೆ. ಭಾನುವಾರ ಬಹಿರಂಗವಾಗಿರುವ ಮಾಹಿತಿಯಂತೆ ಹೊಸದಾಗಿ 15,413 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಭೀತಿಯ ಸುಳಿಯಲ್ಲಿ ದೇಶ ಸಿಲುಕಿದ್ದು ಶನಿವಾರ ರಾತ್ರಿವರೆಗೆ 24ತಾಸುಗಳಲ್ಲಿ ಸುಮಾರು 306 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಕೂಡ 13,254ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಲಾಕ್’ಡೌನ್ ಸಡಿಲಿಕೆಯಾದ ನಂತರ ಅಂದರೆ ಜೂನ್ 1ರಿಂದ 20ರ ನಡುವೆ ಸುಮಾರು 2 ಲಕ್ಷ ಸೋಂಕಿತರು ಪತ್ತೆಯಾಗಿದ್ದಾರೆಂದು ಕೇಂದ್ರ ಸರ್ಕಾರದ ಅಂಕಿ ಅಂಶ ಹೇಳುತ್ತಿದೆ. ಮಹಾರಾಷ್ಟ್ರದಲ್ಲಿ ಈವರೆಗೆ 1,28,205 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯಲ್ಲಿ ಈವರೆಗೆ 56,746 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

Related posts