ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಅಭಿಮಾನಿಗಳು ಮಾತ್ರವಲ್ಲ ಚಿತ್ರೋದ್ಯಮದ ಗಣ್ಯರೂ ಆಘಾತಕ್ಕೊಳಗಾಗಿದ್ದಾರೆ.
ಅಮಿತಾಬ್ ಬಚ್ಚನ್ ಮಾತ್ರವಲ್ಲ ಅವರ ಪುತ್ರ ಅಭಿಷೇಕ್ ಬಚ್ಚನ್ ಕೂಡಾ ಸೋಂಕಿಗೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿರುವವರು ಹಾಗೂ ಕುಟುಂಬ ಸದಸ್ಯರೆಲ್ಲರನ್ನೂ ಪರೀಕ್ಷೆಗೆ ಗುರಿಪಡಿಸಲಾಗಿದೆ.
ಈ ನಡುವೆ ಅಮಿತಾಬ್ ಸೊಸೆ ನಟಿ ಐಶ್ವರ್ಯ ರೈ ಸೇಫಾಗಿದ್ದಾರೆ. ಅವರ ಪರೀಕ್ಷೆಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯ ಐಸೋಲೇಷನ್ ಘಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಈ ಮಧ್ಯೆ ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿ ತಾವು ಆಸ್ಪತ್ರೆಗೆ ದಾಖಲಾಗಿದೇವೆ. ತಮ್ಮೊಂದಿಗೆ ಸಂಪರ್ಕ ಹೊಂದಿದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.
Earlier today both my father and I tested positive for COVID 19. Both of us having mild symptoms have been admitted to hospital. We have informed all the required authorities and our family and staff are all being tested. I request all to stay calm and not panic. Thank you. 🙏🏽
— Abhishek 𝐁𝐚𝐜𝐡𝐜𝐡𝐚𝐧 (@juniorbachchan) July 11, 2020